ಈ ಹಸಿರು ತರಕಾರಿಯಿಂದ ಯಾವ್ಯಾವ ಕಾಯಿಲೆ ದೂರವಾಗುತ್ತೆ ಗೊತ್ತೇ..?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬ್ರೊಕೊಲಿ ಆರೋಗ್ಯಕರ ತರಕಾರಿಗಳಲ್ಲಿ ಮುಂಚೂಣಿಯಲ್ಲಿದೆ. ಈ ಹಸಿರು ತರಕಾರಿಯಲ್ಲಿ ಹೆಚ್ಚಿನ ಪೋಷಕಾಂಶಗಳಿವೆ. ನೋಡಲು ಹೂಕೋಸಿನಂತಿರುವ ಇದರಲ್ಲಿ ವಿಟಮಿನ್ ಇ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ.

ಬ್ರೊಕೊಲಿಯಲ್ಲಿರುವ ಹೆಚ್ಚಿನ ಮಟ್ಟದ ಫ್ಲೇವನಾಯ್ಡ್‌, ಕ್ಯಾರೊಟಿನಾಯ್ಡ್‌, ಲುಟೀನ್, ಬೀಟಾ ಕ್ಯಾರೋಟಿನ್ ಮತ್ತು ಆಂಟಿಆಕ್ಸಿಡೆಂಟ್‌ಗಳಾದ ಝೀಕ್ಸಾಂಥಿನ್‌ಗಳು ದೇಹದಲ್ಲಿನ ಸ್ವತಂತ್ರ ರಾಡಿಕಲ್‌ಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

ಬ್ರೊಕೊಲಿಯಲ್ಲಿ ಕ್ಯಾಲ್ಸಿಯಂ ಅಧಿಕವಾಗಿದ್ದು, ಮೂಳೆಗಳನ್ನು ಬಲಪಡಿಸಲು ಮತ್ತು ಮೂಳೆಗಳನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದು ದೇಹದಲ್ಲಿ ಕ್ಯಾನ್ಸರ್ ಗೆ ಕಾರಣವಾಗುವ ರಾಸಾಯನಿಕಗಳನ್ನು ಹೊರಹಾಕುತ್ತದೆ. ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುತ್ತದೆ. ಮಧುಮೇಹಕ್ಕೆ ಈ ತರಕಾರಿ ರಾಮಬಾಣವಾಗಿದೆ. ಬ್ರೊಕೊಲಿಯನ್ನು ಹಸಿಯಾಗಿ ತಿನ್ನುವುದರಿಂದ ಯಾವುದೇ ಹೃದ್ರೋಗ, ಕ್ಯಾನ್ಸರ್ ಮತ್ತು ದೀರ್ಘಕಾಲದ ಕಾಯಿಲೆಗಳಿಂದ ನಮ್ಮನ್ನು ರಕ್ಷಿಸಿಕೊಳ್ಳಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!