ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಾರೆನ್ಸ್ ಬಿಷ್ಣೋಯ್ ತಂಡದ ನಾಲ್ವರು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಯೋಜನೆ ರೂಪಿಸಿದ್ದರು. ಅವರನ್ನು ಬಂಧಿಸಲಾಗಿದೆ ಎಂದು ನವಿ ಮುಂಬೈ ಪೊಲೀಸರು ತಿಳಿಸಿದ್ದಾರೆ.
ಧನಂಜಯ್ ಅಲಿಯಾಸ್ ಅಜಯ್ ಕಶ್ಯಪ್, ಗೌರವ್ ಭಾಟಿಯಾ ಅಲಿಯಾಸ್ ನಹ್ವಿ, ವಾಸ್ಪಿ ಖಾನ್ ಅಲಿಯಾಸ್ ವಾಸಿಂ ಚಿಕ್ನಾ ಮತ್ತು ರಿಜ್ವಾನ್ ಖಾನ್ ಅಲಿಯಾಸ್ ಜಾವೇದ್ ಖಾನ್ ಬಂಧಿತರು.
ಆರೋಪಿಗಳು ಪನ್ವೇಲ್ನಲ್ಲಿರುವ ಫಾರ್ಮ್ಹೌಸ್ ಬಳಿ ಸಲ್ಮಾನ್ ಖಾನ್ ಅವರ ಕಾರಿನ ಮೇಲೆ ದಾಳಿ ಮಾಡಲು ಯೋಜಿಸಿದ್ದರು. ಪಾಕಿಸ್ತಾನಿ ಪೂರೈಕೆದಾರರಿಂದ ವಸ್ತುಗಳನ್ನು ಸಂಗ್ರಹಿಸಲು ಸಂಚು ರೂಪಿಸಲಾಗಿತ್ತು. ವಿಚಾರಣೆ ವೇಳೆ ಆರೋಪಿ ಅಜಯ್ ಕಶ್ಯಪ್ ಪಾಕಿಸ್ತಾನದಲ್ಲಿ ಡೋಗಾ ಎಂಬ ವ್ಯಕ್ತಿಯೊಂದಿಗೆ M-16, AK-47 ಮತ್ತು AK-92 ಖರೀದಿಸಲು ಸಂವಹನ ನಡೆಸಿದ್ದಾಗಿ ಬಹಿರಂಗಪಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.