ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಆಗಮಿಸಿ, ಅಹಮದಾಬಾದ್ ವಿಮಾನ ಪತನ ದುರಂತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.
ಇಂದು ಬೆಳಗ್ಗೆ ಪ್ರಧಾನಿಯವರು ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಮೇಘನಿನಗರ ಪ್ರದೇಶದಲ್ಲಿ ಸಂಭವಿಸಿದ ಅಪಘಾತ ಸ್ಥಳಕ್ಕೆ ನೇರವಾಗಿ ಕಾರಿನಲ್ಲೇ ತೆರಳಿದರು. ಇಲ್ಲಿ ಅಧಿಕಾರಿಗಳ ಬಳಿ ಘಟನೆ ಬಗ್ಗೆ ಮಾಹಿತಿ ಪಡೆದ ಮೋದಿ ನಂತರ ಅಹಮದಾಬಾದ್‌ನ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ವಿಮಾನ ದುರಂತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಬಳಿಕ ಅಲ್ಲಿಂದ ಏರ್‌ಪೋರ್ಟ್‌ನತ್ತ ತೆರಳಿದ್ದಾರೆ.
ಗುರುವಾರ ಮಧ್ಯಾಹ್ನ ಸಂಭವಿಸಿದ್ದ ಭೀಕರ ವಿಮಾನ ಅಪಘಾತದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 265 ಜನ ಮೃತಪಟ್ಟಿದ್ದಾರೆ. ಮೆಡಿಕಲ್ ಕಾಲೇಜು ಹಾಸ್ಟೆಲ್ ಮೇಲೆಯೇ ವಿಮಾನ ಪತನವಾಗಿದ್ದರಿಂದ ಅಲ್ಲಿದ್ದವರೂ ಅನೇಕರು ಮೃತಪಟ್ಟಿದ್ದಾರೆ. ಸಾವಿನ ಬಗ್ಗೆ ಅಧಿಕೃತ ಘೋಷಣೆ ಡಿಎನ್ಎ ಪರೀಕ್ಷೆಯ ನಂತರ ಪ್ರಕಟವಾಗಲಿದೆ.