March 2, 2026
Monday, March 2, 2026
spot_img

ಇರಾನ್‌ ದಾಳಿಗೆ ಪ್ರಧಾನಿ ಮೋದಿ ಖಂಡನೆ, ಇಸ್ರೇಲ್‌ ಪ್ರಧಾನಿಗೆ ಫೋನ್‌ ಕಾಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಿ ಮೋದಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನತೆ ಮಧ್ಯೆ ಕರೆ ಮಾಡಿ, ಭಾರತೀಯರ ರಕ್ಷಣೆ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿ, ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಭಾರತದ ಕಳವಳಗಳನ್ನ ತಿಳಿಸಿದ್ದೇನೆ. ಜೊತೆಗೆ ನಾಗರಿಕರನ್ನ ರಕ್ಷಿಸುವ ಮಹತ್ವವನ್ನ ಎತ್ತಿ ತೋರಿಸಿದ್ದೇನೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಪ್ರಾದೇಶಿಕ ಪರಿಸ್ಥಿತಿಯ ಕುರಿತು ಚರ್ಚಿಸಲು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಕರೆ ಮಾಡಿದ್ದೇನೆ. ಇತ್ತೀಚಿನ ಬೆಳವಣಿಗೆಗಳ ಕುರಿತು ಭಾರತದ ಕಳವಳಗಳನ್ನು ತಿಳಿಸಿದ್ದೇನೆ ಮತ್ತು ನಾಗರಿಕರ ಸುರಕ್ಷತೆಯನ್ನ ಆದ್ಯತೆಯಾಗಿ ಪರಿಗಣಿಸುವಂತೆ ಒತ್ತಿ ಹೇಳಿದ್ದೇನೆ. ಯುದ್ಧವನ್ನ ಬೇಗನೆ ನಿಲ್ಲಿಸುವಂತೆ ಭಾರತ ಪುನರುಚ್ಚರಿಸುತ್ತದೆ ಎಂದು ತಿಳಿಸಿರುವುದಾಗಿ ಬರೆದುಕೊಂಡಿದ್ದಾರೆ.

ಯುಎಇ ಅಧ್ಯಕ್ಷರ ಜತೆಗೂ ಮಾತು

ಯುಎಇ ಅಧ್ಯಕ್ಷರೊಂದಿಗೂ ಮಾತನಾಡಿದ್ದು, ಯುಎಇ ಮೇಲಿನ ಇರಾನ್‌ ದಾಳಿಯನ್ನ ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸುತ್ತೇನೆ. ʻಯುಎಇ ಅಧ್ಯಕ್ಷ ನನ್ನ ಸಹೋದರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತನಾಡಿದೆ. ಯುಎಇ ಮೇಲಿನ ದಾಳಿಗಳನ್ನು ತೀವ್ರವಾಗಿ ಖಂಡಿಸಿದೆ ಮತ್ತು ಈ ದಾಳಿಯಲ್ಲಿನ ಜೀವಹಾನಿಗೆ ಸಂತಾಪ ಸೂಚಿಸಿದೆ. ಈ ಕಷ್ಟದ ಸಮಯದಲ್ಲಿ ಭಾರತ ಯುಎಇಯೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ. ಯುಎಇಯಲ್ಲಿ ವಾಸಿಸುವ ಭಾರತೀಯ ಸಮುದಾಯವನ್ನ ನೋಡಿಕೊಂಡಿದ್ದಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಿದೆ. ನಾವು ಉದ್ವಿಗ್ನತೆ ನಿವಾರಣೆ, ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನ ಬೆಂಬಲಿಸುತ್ತೇವೆʼ ಎಂದು ಮತ್ತೊಂದು ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !