ಪ್ರಾಜೆಕ್ಟ್ ಟೈಗರ್‌ @ 50: ಬಿಡುಗಡೆಯಾಯ್ತು ಯಶಸ್ಸಿನ ಸ್ಮರಣಾರ್ಥ ನಾಣ್ಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಂಡೀಪುರದಿಂದ ವಿಶೇಷ ಹೆಲಿಕಾಫ್ಟರ್ ಮೂಲಕ ಮೈಸೂರಿನ ಓವಲ್ ಮೈದಾನದ ಹೆಲಿಪ್ಯಾಡ್‌ಗೆ ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪ್ರಾಜೆಕ್ಟ್ ಟೈಗರ್‌ʼ 50 ವರ್ಷದ ಸಂಭ್ರಮ ಹಿನ್ನೆಲೆ ಮೈಸೂರಿನ ಘಟಿಕೋತ್ಸವ ಭವನದಲ್ಲಿ ಸ್ಮರಣಾರ್ಥ ನಾಣ್ಯವನ್ನು ಪ್ರಧಾನಿ ಮೋದಿಯವರು ಅನಾವರಣಗೊಳಿಸಿದರು. ಹಾಗೆಯೇ 2022ರ ಹುಲಿ ಗಣತಿ ವರದಿಯನ್ನು ಸಹ ಬಿಡುಗಡೆಗೊಳಿಸಿದರು.

ಇದೇ ವೇಳೆ ಮೋದಿ ಅವರು ಇಂಟರ್ನ್ಯಾಷನಲ್ ಬಿಗ್ ಕ್ಯಾಟ್ಸ್ ಅಲೈಯನ್ಸ್ (ಐಬಿಸಿಎ) ಅನ್ನು ಪ್ರಾರಂಭಿಸಿದರು ಮತ್ತು 2022ರ ವರದಿ ಪ್ರಕಾರ ರಾಜ್ಯದಲ್ಲಿರುವ ಹುಲಿಗಳ ಸಂಖ್ಯೆ 3,167.

ಈ ಸಂದರ್ಭದಲ್ಲಿ ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್, ಕೇಂದ್ರದ ಪರಿಸರ ಅರಣ್ಯ ಹಾಗೂ ಹವಾಮಾನ ಬದಲಾವಣೆ ಖಾತೆಯ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಪ್ರಧಾನಿ ಮೋದಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿನ ಸಿಬ್ಬಂದಿ ಮತ್ತು ಸ್ವ-ಸಹಾಯ ಗುಂಪುಗಳೊಂದಿಗೆ ಸಂವಾದ ನಡೆಸಿದರು. ಸುಂದರವಾದ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಬೆಳಿಗ್ಗೆ ಕಳೆದರು ಮತ್ತು ಭಾರತದ ವನ್ಯಜೀವಿಗಳು, ನೈಸರ್ಗಿಕ ಸೌಂದರ್ಯ ಮತ್ತು ವೈವಿಧ್ಯತೆಯ ಒಂದು ನೋಟವನ್ನು ವೀಕ್ಷಿಸಿದರು.

ಬಳಿಕ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅಲ್ಲಿ ಮಾವುತರು ಮತ್ತು ಕಾವಾಡಿಗಳೊಂದಿಗೆ ಸಂವಾದ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!