Friday, June 2, 2023

Latest Posts

ಇಂದಿಗೂ ಹಿರೋಷಿಮಾ ಹೆಸರು ಕೇಳಿದ್ರೆ ಜಗತ್ತು ನಡುಗುತ್ತದೆ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಪಾನ್‌ನ ಹಿರೋಷಿಮಾದಲ್ಲಿ ವಾರ್ಷಿಕ ಜಿ-7 ಸಮ್ಮೇಳನಕ್ಕೆ ಅಲ್ಲಿನ ಪ್ರಧಾನಿ ಫುಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಜಪಾನ್‌ಗೆ ಭೇಟಿ ನೀಡಿದರು. ಶನಿವಾರ ಬೆಳಗ್ಗೆ ಹಿರೋಷಿಮಾದಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದ ಮೋದಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮೋದಿಯವರು ವಿಶ್ವಕ್ಕೆ ಶಾಂತಿಯ ಸಂದೇಶವನ್ನೂ ನೀಡಿದರು.

ʻಇಂದಿಗೂ ಜಗತ್ತು ಹಿರೋಷಿಮಾ ಹೆಸರು ಕೇಳಿದರೆ ಹೆದರುತ್ತಿದೆ. ಜಿ7 ಸಮ್ಮೇಳನಕ್ಕಾಗಿ ಜಪಾನ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅನಾವರಣಗೊಳಿಸುವ ಅವಕಾಶ ನನಗೆ ಸಿಕ್ಕಿತು ಮತ್ತು ಅದಕ್ಕಾಗಿ ನನಗೆ ತುಂಬಾ ಸಂತೋಷವಾಗಿದೆ. ಹಿರೋಷಿಮಾದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯು ಅಹಿಂಸೆಯ ಕಲ್ಪನೆಯನ್ನು ಉತ್ತೇಜಿಸುತ್ತದೆ ಎಂದರು.

ನಾನು ಜಪಾನ್ ಪ್ರಧಾನಿಗೆ ಉಡುಗೊರೆಯಾಗಿ ನೀಡಿದ ಬೋಧಿ ವೃಕ್ಷವನ್ನು ಹಿರೋಷಿಮಾದಲ್ಲಿ ನೆಡಲಾಗಿದೆ ಎಂದು ತಿಳಿದು ಬಹಳ ಸಂತೋಷವಾಯಿತು. ಅದು ನನಗೆ ಹೆಚ್ಚಿನ ತೃಪ್ತಿಯನ್ನು ನೀಡಿದೆ ಎಂದು ಪ್ರಧಾನಿ ಹೇಳಿದರು. ಜನರು ಇಲ್ಲಿಗೆ ಭೇಟಿ ನೀಡಿದಾಗ ಶಾಂತಿಯ ಮಹತ್ವವನ್ನು ಅರ್ಥಮಾಡಿಕೊಳ್ಳಬಹುದು ಎಂದು ಈ ಸಂದರ್ಭದಲ್ಲಿ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!