11 ಕೋಟಿಗೂ ಹೆಚ್ಚು ರೈತರ ಖಾತೆಗೆ ಪಿಎಂ ಕಿಸಾನ್ ಕಂತು ಜಮಾ: ಕೇಂದ್ರ ಸಚಿವ ಚೌಹಾಣ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಪಿಎಂ ಕಿಸಾನ್ ಯೋಜನೆಯಡಿ 11 ಕೋಟಿಗೂ ಹೆಚ್ಚು ರೈತರಿಗೆ 3.24 ಲಕ್ಷ ಕೋಟಿ ರೂಪಾಯಿಗಳನ್ನು ವಿತರಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಾಹಿತಿ ನೀಡಿದ್ದಾರೆ.

ಇಂದು ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದು, ಪಿಎಂ ಕಿಸಾನ್ ಯೋಜನೆಯ 17 ನೇ ಕಂತು ಈ ವರ್ಷದ ಜೂನ್‌ನಲ್ಲಿ 9.26 ಕೋಟಿ ರೈತರ ಕುಟುಂಬಗಳಿಗೆ 20 ಸಾವಿರ ಕೋಟಿ ರೂಪಾಯಿಗಳಿಗಿಂತ ಹೆಚ್ಚು ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಒಟ್ಟು 51,849 ತರಬೇತಿ ಪಡೆದ ಕೃಷಿ ಸಖಿಗಳ ಪೈಕಿ 34,973 ಮಂದಿಗೆ ಕೃಷಿ ವಿಸ್ತರಣಾ ಕಾರ್ಯಕರ್ತೆಯ ಪ್ರಮಾಣ ಪತ್ರ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!