ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿಯವರ ಕಿಸಾನ್ ಸಮ್ಮಾನ್ ಯೋಜನೆ ರೈತರ ಪಾಲಿನ ಸಂಜೀವಿನಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ 18ನೇ ಕಂತಿನ ಹಣವನ್ನು ರೈತರ ಖಾತೆಗೆ ನೇರವಾಗಿ ವರ್ಗಾಯಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ಯೋಜನೆ ರೈತರಿಗೆ ಉತ್ತೇಜನ ನೀಡಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ವಾರ್ಷಿಕ 6000 ರೂ. ದೇಶದ 11 ಮಿಲಿಯನ್ ರೈತರಿಗೆ ಹಣವನ್ನು ಒದಗಿಸುವ ಮೂಲಕ ಪ್ರಯೋಜನ ಪಡೆದಿದ್ದಾರೆ ಎಂದು ಹೇಳಿದ್ದಾರೆ.