ಪಿಎಂ – ಕಿಸಾನ್ ಯೋಜನೆ: ರೈತರ ಬ್ಯಾಂಕ್‌ ಖಾತೆಗೆ 16 ಸಾವಿರ ಕೋಟಿ ರೂ. ವರ್ಗಾಯಿಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರಕಾರದಿಂದ ರೈತರಿಗೆ ನೀಡುತ್ತಿರುವ ಪಿಎಂ – ಕಿಸಾನ್ ಯೋಜನೆಯ 12ನೇ ಕಂತನ್ನು ಪ್ರಧಾನಿ ಮೋದಿ ಇಂದು ವರ್ಗಾಯಿಸಿದ್ದಾರೆ.

ಪಿಎಂ – ಕಿಸಾನ್ ಯೋಜನೆಯ 11 ಕೋಟಿಗೂ ಅಧಿಕ ಫಲಾನುಭವಿ ರೈತರಿಗೆ 16 ಸಾವಿರ ಕೋಟಿ ರೂ. ಅನ್ನು ಅವರ ಬ್ಯಾಂಕ್‌ ಖಾತೆಗೆ ವರ್ಗಾಯಿಸಿದ್ದಾರೆ. ಈ ಮೂಲಕ ಒಟ್ಟಾರೆ 2.16 ಲಕ್ಷ ಕೋಟಿ ರೂ. ಹಣವನ್ನು ರೈತರ ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡಲಾಗಿದೆ.

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹ ರೈತರಿಗೆ ಪ್ರತಿ ವರ್ಷಕ್ಕೆ ಮೂರು ಕಂತುಗಳಲ್ಲಿ ತಲಾ 2,000 ರೂ. ಗಳಂತೆ ಒಟ್ಟು 6 ಸಾವಿರ ರೂ. ಅನ್ನು ನೀಡಲಾಗುತ್ತದೆ. ಫಲಾನುಭವಿಗಳಿಗಳ ಬ್ಯಾಂಕ್‌ ಅಕೌಂಟ್‌ಗಳಿಗೆ ನೇರವಾಗಿ ಇದನ್ನು ವರ್ಗಾಯಿಸಲಾಗುತ್ತದೆ. ಫೆಬ್ರವರಿ 2019 ರಲ್ಲಿ ಮೋದಿ ಸರ್ಕಾರ ಈ ಯೋಜನೆಯನ್ನು ಆರಂಭಿಸಲಾಯಿತಾದರೂ, ಡಿಸೆಂಬರ್ 2018 ರಿಂದಲೇ ಇದು ಜಾರಿಗೆ ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!