ಹಿಮಾಚಲದ ಉನಾದಲ್ಲಿ ಬಲ್ಕ್ ಡ್ರಗ್ ಪಾರ್ಕ್‌ಗೆ ಶಂಕುಸ್ಥಾಪನೆ: ಪ್ರಧಾನಿ ಅಭಿಪ್ರಾಯವೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಗುರುವಾರ) ಬೃಹತ್ ಡ್ರಗ್ ಪಾರ್ಕ್‌ಗೆ ಶಂಕುಸ್ಥಾಪನೆ ಮಾಡಿದರು ಜೊತೆಗೆ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ), ಉನಾವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಮಾತನಾಡಿದ ಪ್ರಧಾನಿ ಮೋದಿ ಡ್ರಗ್‌ ಪಾರ್ಕ್‌ನ ಮಹತ್ವವದ ಬಗ್ಗೆ ತಿಳಿಸಿದರು. ಉನಾದಲ್ಲಿ ದೇಶದ ಎರಡನೇ ಬೃಹತ್ ಡ್ರಗ್ ಪಾರ್ಕ್‌ನಲ್ಲಿ ಕೆಲಸ ಪ್ರಾರಂಭವಾಗುತ್ತದೆ. ಅದರ ಜೊತೆಗೆ ವಿವಿಧ ಯೋಜನೆಗಳನ್ನು ಉದ್ಘಾಟಿಸಲಾಗಿದೆ, ಅವುಗಳಿಂದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಬಲ್ಕ್ ಡ್ರಗ್ ಪಾರ್ಕ್ ನಿರ್ಮಿಸಲು ಮೂರು ರಾಜ್ಯಗಳಲ್ಲಿ ಹಿಮಾಚಲ ಪ್ರದೇಶ ರಾಜ್ಯವನ್ನು ಆಯ್ಕೆ ಮಾಡಲಾಗಿದೆ. ಭಾರತವನ್ನು ವಿಶ್ವದಲ್ಲೇ ನಂಬರ್ ಒನ್ ಔಷಧಿ ತಯಾರಕರನ್ನಾಗಿ ಮಾಡುವಲ್ಲಿ ರಾಜ್ಯವು ನಿರ್ಣಾಯಕ ಪಾತ್ರ ವಹಿಸಿದೆ ಎಂದರು. ಔಷಧಿ ತಯಾರಿಕೆಗೆ ಸಂಬಂಧಿಸಿದ ಕಚ್ಚಾ ಸಾಮಗ್ರಿಗಳನ್ನು ಹಿಮಾಚಲ ಪ್ರದೇಶದಲ್ಲಿ ಉತ್ಪಾದಿಸಲಾಗುವುದು. ಇತರ ದೇಶಗಳ ಮೇಲಿನ ಭಾರತದ ಅವಲಂಬನೆ ಗಮನಾರ್ಹವಾಗಿ ಕಡಿಮೆಯಾಗುತ್ತದೆ.

ಆಯುಷ್ಮಾನ್ ಭಾರತ್ ಯೋಜನೆಯಡಿ ಜನೌಷಧಿ ಕೇಂದ್ರದ ಮೂಲಕ ಬಡವರು ಮತ್ತು ನಿರ್ಗತಿಕರಿಗೆ ಸರ್ಕಾರ 5 ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸಾ ವೆಚ್ಚವನ್ನು ನೀಡುತ್ತಿದೆ. ಜನರಿಗೆ ಗುಣಮಟ್ಟದ ಮತ್ತು ಕೈಗೆಟುಕುವ ವೈದ್ಯಕೀಯ ಸೇವೆಯನ್ನು ಒದಗಿಸಲು ಬಲ್ಕ್ ಡ್ರಗ್ ಪಾರ್ಕ್ ಸರ್ಕಾರದ ಅಭಿಯಾನಕ್ಕೆ ಮತ್ತಷ್ಟು ಬಲವನ್ನು ನೀಡಲಿದೆ.

ಯುವಜನರ ಕೌಶಲ್ಯ ಮತ್ತು ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುವುದು ನಮ್ಮ ದೊಡ್ಡ ಆದ್ಯತೆಯಾಗಿದೆ. ಹಿಮಾಚಲದ ಯುವಕರು ಸೇನೆಯಲ್ಲಿ ಸೇವೆ ಸಲ್ಲಿಸಿ ದೇಶದ ಭದ್ರತೆಯಲ್ಲಿ ಹೊಸ ಆಯಾಮಗಳನ್ನು ಸೃಷ್ಟಿಸಿದ್ದಾರೆ. ವಿವಿಧ ರೀತಿಯ ಕೌಶಲ್ಯಗಳು ಅವರನ್ನು ಸೇನೆಯ ಉನ್ನತ ಸ್ಥಾನಗಳಿಗೆ ಕೊಂಡೊಯ್ಯಲು ಸಹಾಯ ಮಾಡುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!