ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸಲು ಕೇಂದ್ರ ಸರ್ಕಾರ ಜೂ. 24 ರಂದು ಸರ್ವಪಕ್ಷಗಳ ಸಭೆ ಕರೆದಿದೆ.
ಕೆಲವು ದಿನಗಳ ಹಿಂದೆ,ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿ, ಈ ಕುರಿತು ಚರ್ಚೆ ನಡೆಸಲು ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆಯದೇ ಇರುವುದಕ್ಕೆ ತರಾಟೆಗೆ ತೆಗೆದುಕೊಂಡಿದ್ದರು.
ಇದೀಗ ಅಮಿತ್ ಶಾ ಅವರು ಸರ್ವಪಕ್ಷಗಳ ಸಭೆ ಕರೆದಿದ್ದು, ಆದ್ರೆ ಈ ಸಭೆಗೆ ಪ್ರಧಾನಿ ಮೋದಿ ಗೈರಾಗಲಿದ್ದಾರೆ.
ಈ ಕುರಿತು ಆಕ್ರೋಶವ್ಯಕ್ತಪಡಿಸಿದ ರಾಹುಲ್ ಗಾಂಧಿ , 50 ದಿನಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಆದರೆ ಪ್ರಧಾನಿ ಮೌನವಾಗಿದ್ದಾರೆ. ಸ್ವತಃ ಪ್ರಧಾನಿಯೇ ದೇಶದಲ್ಲಿ ಇಲ್ಲದಿದ್ದಾಗ ಸರ್ವಪಕ್ಷ ಸಭೆ ಕರೆಯಲಾಗಿದೆ. ಈ ಸಭೆಯು ಪ್ರಧಾನಿಗೆ ಮುಖ್ಯವಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.