ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರಿಂದ ದೇಶದ ಜನತೆಗೆ ಹೋಳಿ ಶುಭಾಶಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಹೋಳಿ ಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್‌ ಶಾ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ದೇಶದ ಜನರಿಗೆ ಶುಕ್ರವಾರ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಎಲ್ಲರಿಗೂ ಹೋಳಿ ಶುಭಾಶಯಗಳು. ಹಬ್ಬದ ಬಣ್ಣಗಳು ಜನರ ಬದುಕಿಗೆ ವಿನೂತನ ಬಣ್ಣಗಳನ್ನು ನೀಡಲಿ. ಪ್ರೀತಿ, ವಿಶ್ವಾಸ ಮತ್ತು ಪರಸ್ಪರ ಭ್ರಾತೃತ್ವ ಎಲ್ಲರ ಬಾಳಲ್ಲೂ ಮಿನುಗಲಿ. ಪ್ರತಿ ಬಣ್ಣವೂ ಬದುಕಿಗೆ ಸಂತಸ ತರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಕೋರಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ದೇಶದ ಜನತೆಗೆ ಹೋಳಿ ಹಬ್ಬದ ಶುಭಕಾಮನೆಗಳನ್ನು ತಿಳಿಸಿದ್ದಾರೆ.

ಕೆಟ್ಟದನ್ನು ದಹಿಸಿ, ಒಳ್ಳೆಯದನ್ನು ಉಳಿಸಿಕೊಳ್ಳಿ ಎಂಬ ಸಂದೇಶ ಸಾರುವ ಈ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕರೆನೀಡಿ, ಹಬ್ಬದ ಶುಭಾಶಯ ಕೋರಿದ್ದಾರೆ.

 

 

 

 

 

 

 

 

 

 

 

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!