August 6, 2026
Thursday, August 6, 2026
spot_img

ಜಕಾರ್ತ ತಲುಪಿದ ಪ್ರಧಾನಿ ಮೋದಿ: ಹಲವು ಮಹತ್ವದ ಒಪ್ಪಂದಗಳ ನಿರೀಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೂರು ರಾಷ್ಟ್ರಗಳ ಅಧಿಕೃತ ಪ್ರವಾಸದ ಮೊದಲ ಹಂತವಾಗಿ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾಕ್ಕೆ ಆಗಮಿಸಿದ್ದಾರೆ.

ಜಕಾರ್ತ ವಿಮಾನ ನಿಲ್ದಾಣದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಪ್ರಧಾನಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ಭೇಟಿಯಲ್ಲಿ ಉಭಯ ದೇಶಗಳ ಸಹಕಾರ ವಿಸ್ತರಣೆಗೆ ಮಹತ್ವದ ಚರ್ಚೆಗಳು ನಡೆಯಲಿವೆ.

ಭದ್ರತೆ, ವ್ಯಾಪಾರಕ್ಕೆ ಆದ್ಯತೆ

ಉಭಯ ನಾಯಕರು ಸಮುದ್ರ ಭದ್ರತೆ, ವ್ಯಾಪಾರ, ನವೀಕರಿಸಬಹುದಾದ ಇಂಧನ, ಡಿಜಿಟಲ್ ತಂತ್ರಜ್ಞಾನ ಹಾಗೂ ಹೂಡಿಕೆ ವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳ ಸಹಕಾರದ ಬಗ್ಗೆ ಚರ್ಚಿಸಲಿದ್ದಾರೆ. ಡಿಜಿಟಲ್ ಪಾವತಿ ವ್ಯವಸ್ಥೆಗಳ ವಿಸ್ತರಣೆ ಕುರಿತೂ ಒಪ್ಪಂದಗಳು ಸಾಧ್ಯವೆಂದು ನಿರೀಕ್ಷಿಸಲಾಗಿದೆ.

‘ಆಕ್ಟ್ ಈಸ್ಟ್’ ನೀತಿಗೆ ಮತ್ತಷ್ಟು ಬಲ

ಭಾರತದ ‘ಆಕ್ಟ್ ಈಸ್ಟ್’ ನೀತಿಯಲ್ಲಿ ಇಂಡೋನೇಷ್ಯಾ ಪ್ರಮುಖ ಪಾಲುದಾರ ರಾಷ್ಟ್ರವಾಗಿದೆ. ಆಸಿಯಾನ್ ವಲಯದಲ್ಲಿ ಬಾಂಧವ್ಯ ಬಲಪಡಿಸುವ ಉದ್ದೇಶದಿಂದ ಈ ಭೇಟಿ ಮಹತ್ವ ಪಡೆದಿದ್ದು, ರಾಜತಾಂತ್ರಿಕ ಮತ್ತು ಆರ್ಥಿಕ ಸಹಕಾರಕ್ಕೆ ಹೊಸ ಉತ್ತೇಜನ ದೊರೆಯುವ ನಿರೀಕ್ಷೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !