ಜಕಾರ್ತಾದ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಕಾರ್ತಾ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯುತ್ತಿರುವ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾದರು.
ಇಂಡೋನೇಷ್ಯಾದ ಜಕಾರ್ತಾ ಕನ್ವೆನ್ಷನ್ ಸೆಂಟರ್‌ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೊ ಆತ್ಮೀಯವಾಗಿ ಬರಮಾಡಿಕೊಂಡರು.

ಗುರುವಾರ ಮುಂಜಾನೆ ಜಕಾರ್ತಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತೀಯ ಸಮುದಾಯದಿಂದ ಭವ್ಯ ಸ್ವಾಗತ ದೊರೆಯಿತು. ಪ್ರಧಾನಿ ಮೋದಿ ಜಕಾರ್ತಾದ ರಿಟ್ಜ್ ಕಾರ್ಲ್ಟನ್ ಹೋಟೆಲ್‌ಗೆ ಮೋದಿ ಬರುತ್ತಿದ್ದಂತೆ, ‘ವಂದೇ ಮಾತರಂ’ ಮತ್ತು ‘ಮೋದಿ ಮೋದಿ’ ಘೋಷಣೆಗಳ ನಡುವೆ ಮೋದಿಯವರನ್ನು ಸ್ವಾಗತಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!