Thursday, March 30, 2023

Latest Posts

ಭಾರತ vs ಆಸ್ಟ್ರೇಲಿಯಾ 4ನೇ ಟೆಸ್ಟ್‌ ಪಂದ್ಯ ವೀಕ್ಷಿಸಲಿದ್ದಾರೆ ಮೋದಿ ಮತ್ತು ಆಂಥೋನಿ ಅಲ್ಬನೀಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಾರ್ಡರ್ ಗವಾಸ್ಕರ್ ಟ್ರೋಫಿಯ ಭಾಗವಾಗಿ, ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯು ಭಾರತದಲ್ಲಿ ನಡೆಯಲಿದೆ. ಈಗಾಗಲೇ ಎರಡು ಟೆಸ್ಟ್ ಪಂದ್ಯಗಳು ಮುಗಿದಿದ್ದು, ಎರಡರಲ್ಲೂ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಮೂರನೇ ಪಂದ್ಯ ಇಂದೋರ್‌ನಲ್ಲಿ ಮಾರ್ಚ್ 1 ರಿಂದ ನಡೆಯಲಿದೆ. ನಾಲ್ಕನೇ ಟೆಸ್ಟ್ ಪಂದ್ಯ ಮಾರ್ಚ್ 9 ರಿಂದ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ವೀಕ್ಷಿಸಲು ಭಾರತ ಮತ್ತು ಆಸ್ಟ್ರೇಲಿಯಾ ಪ್ರಧಾನಿಗಳು ಬರಲಿದ್ದಾರೆ.

ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಾರ್ಚ್ 9 ರಿಂದ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬೆನೆಜ್ ಆಗಮಿಸಲಿದ್ದಾರೆ. ನಾಲ್ಕನೇ ಟೆಸ್ಟ್ ಪಂದ್ಯದ ಆರಂಭದ ದಿನ ಮೈದಾನಕ್ಕೆ ಬಂದು ಪಂದ್ಯ ವೀಕ್ಷಿಸುವ ಸಾಧ್ಯತೆ ಇದೆ. ಆರು ವರ್ಷಗಳ ಅಂತರದ ನಂತರ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಭಾರತದ ನೆಲದಲ್ಲಿ ಟೆಸ್ಟ್ ಸರಣಿ ನಡೆಯಲಿದೆ. 2017 ರಲ್ಲಿ ಭಾರತದಲ್ಲಿ ನಡೆದ ಕೊನೆಯ ನಾಲ್ಕು ಟೆಸ್ಟ್ ಸರಣಿಗಳಲ್ಲಿ ಭಾರತ 2-1 ರಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿತು.

ಬಾರ್ಡರ್ ಗವಾಸ್ಕರ್ ಟ್ರೋಫಿಯ ಭಾಗವಾಗಿ, ಟೀಂ ಇಂಡಿಯಾ ಎರಡು ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ. ಟೀಂ ಇಂಡಿಯಾ ಆಟಗಾರರು ಮೂರೇ ದಿನಗಳಲ್ಲಿ ಎರಡೂ ಪಂದ್ಯಗಳನ್ನು ಮುಗಿಸಿದರು. ಅದರಲ್ಲೂ ಟೀಂ ಇಂಡಿಯಾ ಸ್ಪಿನ್ನರ್ ಗಳಾದ ರವೀಂದ್ರ ಜಡೇಜಾ ಹಾಗೂ ರವಿಚಂದ್ರ ಅಶ್ವಿನ್ ತಮ್ಮ ಅದ್ಭುತ ಸ್ಪಿನ್ ಬೌಲಿಂಗ್ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ರಿಂದ ನಡೆಯಲಿದೆ. ಆಸ್ಟ್ರೇಲಿಯಕ್ಕೆ ಮುಂದಿನ ಎರಡು ಟೆಸ್ಟ್‌ಗಳು ನಿರ್ಣಾಯಕ. ಸರಣಿ ಗೆಲ್ಲಲು ಟೀಂ ಇಂಡಿಯಾ ಇನ್ನೂ ಒಂದು ಟೆಸ್ಟ್ ಪಂದ್ಯ ಗೆಲ್ಲಲೇಬೇಕಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!