ಪ್ರಧಾನಿ ಮೋದಿ ಸಹೋದರನಿಗೆ ಅನಾರೋಗ್ಯ: ಚೆನ್ನೈನ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅಸ್ವಸ್ಥರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಹ್ಲಾದ್ ಪ್ರಧಾನಿ ಮೋದಿಯವರ ಕಿರಿಯ ಸಹೋದರ. ಕೆಲ ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಮಂಗಳವಾರ ಚೆನ್ನೈನಲ್ಲಿ ಖಾಸಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ವರ್ಷ ಡಿಸೆಂಬರ್ ತಿಂಗಳಿನಲ್ಲಿ ಮೈಸೂರಿನಲ್ಲಿ ಪ್ರಹ್ಲಾದ್ ಮೋದಿ ಮತ್ತು ಅವರ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಇದರಿಂದ ಅವರನ್ನು ನಗರದ ಜೆಎಸ್‌ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮ ಮೋದಿ, ಅಮೃತ್ ಮೋದಿ, ಪಂಕಜ್ ಮೋದಿ ಮತ್ತು ಪ್ರಹ್ಲಾದ್ ಮೋದಿ ಎಂಬ ನಾಲ್ವರು ಸಹೋದರರಿದ್ದಾರೆ. ಸೋದರಿ ವಸಂತಿ ಮೋದಿ. ಸದ್ಯ ಕಿಡ್ನಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ನಾಲ್ಕನೇ ಸಹೋದರ ಪ್ರಹ್ಲಾದ್ ಮೋದಿ. ಮೋದಿಯವರಿಗಿಂತ ಎರಡು ವರ್ಷ ಚಿಕ್ಕವರು. ಅಹಮದಾಬಾದ್‌ನಲ್ಲಿ ದಿನಸಿ ಅಂಗಡಿಯನ್ನು ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!