ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದತ್ತ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (ಟಿಡಿಪಿ) ದಾಪುಗಾಲಿಡುತ್ತಿದೆ.
ಅವರ ಪಕ್ಷವು 16 ಲೋಕಸಭಾ ಮತ್ತು 130 ವಿಧಾನಸಭಾ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಹಿನ್ನಲೆಯಲ್ಲಿ ಜೂನ್.9ರಂದು ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇದರ ಬೆನ್ನಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಟಿಡಿಪಿ ನಾಯಕ ಹಾಗೂ ಆಂಧ್ರ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಮ್ಯಾಜಿಕ್ ನಂಬರ್ ರೀಚ್ ಆಗದ ಹಿನ್ನಲೆಯಲ್ಲಿ ಮುಂದಿನ ಸರ್ಕಾರದ ಬಗ್ಗೆ ತೀವ್ರ ಕುತೂಹಲ ಉಂಟಾಗಿದೆ. ಹೌದು ಇದರ ಬೆನ್ನಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಟಿಡಿಪಿ ನಾಯಕ ಹಾಗೂ ಆಂಧ್ರ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಈ ವೇಳೆ ಚಂದ್ರಬಾಬು ನಾಯ್ದು ತಾವು ಎನ್‌ಡಿಎ ಭಾಗವಾಗಿಯೇ ಇರುವುದಾಗಿ ತಿಳಿಸಿದ್ದಾರೆ ಎಂದು ಉನ್ನತ ಮೂಲಗಳು ವರದಿ ಮಾಡಿದೆ.