ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಕರೆ ಮಾಡಿ ರಾಜ್ಯದಲ್ಲಿ ಭದ್ರತಾ ಕ್ರಮಗಳ ಬಗ್ಗೆ ಪರಿಶೀಲಿಸಿದ್ದಾರೆ ಎನ್ನಲಾಗಿದೆ.
ಗಡಿ ರಾಜ್ಯವಾಗಿ ಗುಜರಾತ್‌ನ ಸನ್ನದ್ಧತೆ ಮತ್ತು ಕಚ್, ಬನಸ್ಕಾಂತ, ಪಠಾಣ್ ಮತ್ತು ಜಾಮ್‌ನಗರದಂತಹ ಸೂಕ್ಷ್ಮ ಜಿಲ್ಲೆಗಳಲ್ಲಿ ನಾಗರಿಕರ ಸುರಕ್ಷತೆಗಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರಧಾನಿ ವಿವರಗಳನ್ನು ಕೇಳಿದ್ದಾರೆ ಎಂದು ಪಟೇಲ್ ತಿಳಿಸಿದ್ದಾರೆ.