July 6, 2026
Monday, July 6, 2026
spot_img

ನೂತನ ಸಿಎಂ ವಿಜಯ್​ಗೆ ಪ್ರಧಾನಿ ಮೋದಿ ಕರೆ: ತಮಿಳುನಾಡು ಅಭಿವೃದ್ಧಿಗೆ ಸಂಪೂರ್ಣ ಸಹಕಾರದ ಭರವಸೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್

ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ವಿಜಯ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಇಂದು ಸಂಜೆ ದೂರವಾಣಿ ಕರೆ ಮಾಡಿ ವಿಜಯ್ ಜೊತೆ ಮಾತನಾಡಿದ ಮೋದಿ ಅವರು, ಉತ್ತಮ ಆಡಳಿತಕ್ಕೆ ಶುಭ ಕೋರಿದರು. ಜೊತೆಗೆ ತಮಿಳುನಾಡಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಸಂಪೂರ್ಣ ಸಹಕಾರ ನೀಡಲಿದೆ ಎಂಬ ಭರವಸೆಯನ್ನು ನೀಡಿದರು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ, ಪ್ರಧಾನಿ ಮೋದಿಯವರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳನ್ನು ತಿಳಿಸಿದ್ದು, ಕೇಂದ್ರ ಸರ್ಕಾರವು ತಮಿಳುನಾಡು ಸರ್ಕಾರದೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅಭಿನಂದನೆಗೆ ವಿಜಯ್ ಪ್ರತಿಕ್ರಿಯಿಸಿದ್ದು, ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗ ಶುಭ ಹಾರೈಸಿದ ಪ್ರಧಾನಿ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ತಮ್ಮ ಜನತೆಯ ಯಶಸ್ಸು ಮತ್ತು ಏಳಿಗೆ ಏಕೈಕ ಗುರಿಯಾಗಿದ್ದು, ತಮಿಳುನಾಡಿನ ನಿರಂತರ ಬೆಳವಣಿಗೆಗೆ ಕೇಂದ್ರ ಸರ್ಕಾರದ ಸಕ್ರಿಯ ಬೆಂಬಲ ಮತ್ತು ಸಹಕಾರವನ್ನು ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !