Sunday, November 23, 2025

ರೈತರ ಹೊಲಗಳನ್ನು ಪ್ರಯೋಗಾಲಯಗಳನ್ನಾಗಿ ಪರಿವರ್ತಿಸಿ: ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತವು ಸಾವಯವ ಮತ್ತು ನೈಸರ್ಗಿಕ ಕೃಷಿಗೆ ಜಾಗತಿಕ ಕೇಂದ್ರವಾಗುವ ಹಾದಿಯಲ್ಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿ ರೈತರು ಮತ್ತು ಜವಳಿ ಕಾರ್ಮಿಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲಾ ವಿಜ್ಞಾನಿಗಳು ಮತ್ತು ಸಂಶೋಧನಾ ಸಂಸ್ಥೆಗಳು ಸಾವಯವ ಕೃಷಿಯನ್ನು ಕೃಷಿ ಪಠ್ಯಕ್ರಮದ ಪ್ರಮುಖ ಭಾಗವನ್ನಾಗಿ ಮಾಡಬೇಕೆಂದು ನಾನು ವಿನಂತಿಸುತ್ತೇನೆ. ಹಳ್ಳಿಗಳಿಗೆ ಹೋಗಿ ರೈತರ ಹೊಲಗಳನ್ನು ನಿಮ್ಮ ಪ್ರಯೋಗಾಲಯಗಳನ್ನಾಗಿ ಪರಿವರ್ತಿಸಿ ಎಂದು ಮೋದಿ ಕರೆ ನೀಡಿದ್ದಾರೆ.

ಕಳೆದ 11 ವರ್ಷಗಳಲ್ಲಿ ನಮ್ಮ ದೇಶದ ಇಡೀ ಕೃಷಿ ವಲಯವು ಒಂದು ಪ್ರಮುಖ ಪರಿವರ್ತನೆಗೆ ಸಾಕ್ಷಿಯಾಗಿದೆ. ಈ ಅವಧಿಯಲ್ಲಿ ನಮ್ಮ ದೇಶದ ಕೃಷಿ ರಫ್ತು ದ್ವಿಗುಣಗೊಂಡಿದೆ. ರೈತರ ಕಠಿಣ ಪರಿಶ್ರಮ ಮತ್ತು ಸರ್ಕಾರದ ವಿವಿಧ ಪ್ರಯತ್ನಗಳಿಂದಾಗಿ ಭಾರತೀಯ ಕೃಷಿ ಪ್ರಗತಿಯ ಹೊಸ ಎತ್ತರವನ್ನು ತಲುಪಿದೆ ಎಂದು ಪ್ರಧಾನಿ ಹೇಳಿದ್ದಾರೆ.

ನಾನು ಇಲ್ಲಿ ವೇದಿಕೆಗೆ ಬಂದಾಗ, ಹಲವಾರು ರೈತರು ತಮ್ಮ ಶಾಲುಗಳನ್ನು ಗಾಳಿಯಲ್ಲಿ ಬೀಸುವುದನ್ನು ನೋಡಿದೆ. ಬಿಹಾರದ ತಂಗಾಳಿ ಇಲ್ಲಿಗೆ ತಲುಪಿದಂತೆ ನನಗೆ ಭಾಸವಾಯಿತು ಎಂದು ಮೋದಿ ಹೇಳಿದ್ದಾರೆ.

ಈ ಶೃಂಗಸಭೆಯಲ್ಲಿ ಸಾವಯವ, ನೈಸರ್ಗಿಕ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸುವ ರೈತರನ್ನು ಅವರು ಸನ್ಮಾನಿಸಿದರು.

error: Content is protected !!