ಪ್ರಧಾನಿ ಮೋದಿಗೆ ಪುಟಿನ್ ಕರೆ: ಉಗ್ರರ ವಿರುದ್ಧದ ಹೋರಾಟಕ್ಕೆ ಭಾರತಕ್ಕೆ ಸಂಪೂರ್ಣ ಬೆಂಬಲ ಘೋಷಿಸಿದ ರಷ್ಯಾ ಅಧ್ಯಕ್ಷ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಬಳಿಕ ಭಾರತ- ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರ ನಡುವೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ವ್ಲಾಡಿಮಿರ್ ಪುಟಿನ್ ಅವರು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಜೊತೆಗೆ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಘೋರ ದಾಳಿ ನಡೆಸಿದ ದುಷ್ಕರ್ಮಿಗಳು ಮತ್ತು ಅವರ ಬೆಂಬಲಿಗರನ್ನು ಕಾನೂನು ಕ್ರಮಕ್ಕೆ ತರಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.

ಈ ವೇಳೆ ಭಾರತ-ರಷ್ಯಾದ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ದೃಢಗೊಳಿಸುವ ಬದ್ಧತೆಯನ್ನು ಉಭಯ ನಾಯಕರು ಪುನರುಚ್ಚರಿಸಿದ್ದಾರೆ ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಎರಡನೇ ವಿಶ್ವ ಸಮರದ 80 ನೇ ವಿಜಯೋತ್ಸವದ ಹಿನ್ನೆಲೆಯಲ್ಲಿ ಪುಟಿನ್ ಅವರಿಗೆ ಪ್ರಧಾನಿ ಮೋದಿ ಶುಭಾಶಯ ತಿಳಿಸಿದ್ದು, ವರ್ಷದ ನಂತರ ಭಾರತದಲ್ಲಿ ನಡೆಯಲಿರುವ ವಾರ್ಷಿಕ ಶೃಂಗಸಭೆಗೆ ಅವರನ್ನು ಆಹ್ವಾನಿಸಿರುವುದಾಗಿ ಅವರು ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!