ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಗೋವಾ ಮತ್ತು ಕಾರವಾರ ಕರಾವಳಿಯಲ್ಲಿ ಐಎನ್‌ಎಸ್ ವಿಕ್ರಾಂತ್ ನೌಕಾಪಡೆಯ ಸಿಬ್ಬಂದಿಯೊಂದಿಗೆ ಇಂದು ದೀಪಾವಳಿ ಆಚರಿಸಿದರು.
ಈ ವೇಳೆ ಮಾತನಾಡಿದ ಅವರು ಭಾರತದ ರಕ್ಷಣಾ ಪಡೆಗಳ ನಡುವಿನ ಅಸಾಧಾರಣ ಸಮನ್ವಯವು ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನವನ್ನು ಶರಣಾಗುವಂತೆ ಮಾಡಿತು ಎಂದು ತಿಳಿಸಿದ್ದಾರೆ. ಇದೇ ವೇಳೆ ದೇಶದ ಜನತೆಗೆ ದೀಪಾವಳಿಯ ಶುಭಾಶಯ ಕೋರಿದ್ದಾರೆ.


