Sunday, June 26, 2022

Latest Posts

ಒಮಿಕ್ರಾನ್ ರೂಪಾಂತರಿಯ ಆತಂಕದ ನಡುವೆ ಪ್ರಧಾನಿ ಮೋದಿಯಿಂದ ಲಸಿಕೆ ವಿತರಣೆ ಪರಾಮರ್ಶೆ ಸಭೆ

ಹೊಸ ದಿಗಂತ ಡಿಜಿಟಲ್‌ ಡೆಸ್ಕ್:‌

ಕೊರೋನಾ ಸೋಂಕಿನ ಪ್ರಮಾಣ ಮತ್ತು ಲಸಿಕೆ ಅಭಿಯಾನದ ಸಮಗ್ರ ಮಾಹಿತಿ ಪಡೆಯಲು ಇಂದು ಬೆಳಗ್ಗೆ  ಪ್ರಧಾನಿ ನರೇಂದ್ರ ಮೋದಿಯವರು ಉನ್ನತಾಧಿಕಾರಿಗಳೊಟ್ಟಿಗೆ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಅಧಿಕಾರಿಗಳಿಂದ ಕೋವಿಡ್ -19 ಸ್ಥಿತಿ ಮತ್ತು ವ್ಯಾಕ್ಸಿನೇಷನ್ ಅಭಿಯಾನದ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಸಭೆಯಲ್ಲಿ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ, ಪ್ರಧಾನಿ ಪ್ರಧಾನ ಕಾರ್ಯದರ್ಶಿ ಪಿಕೆ ಮಿಶ್ರಾ, ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮತ್ತು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ ವಿಕೆ ಪಾಲ್ ಸೇರಿದಂತೆ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 8,318 ಹೊಸ ಸೋಂಕಿತರು ದಾಖಲಾಗಿದ್ದಾರೆ. ಶುಕ್ರವಾರ ಬೆಳಗ್ಗೆ ದಾಖಲಾದ ಕೇಸ್​​ಗಳಿಗಿಂತ ಶೇ.21.1ರಷ್ಟು ಕಡಿಮೆಯಾಗಿದೆ.  ಹಾಗೇ, 24 ಗಂಟೆಯಲ್ಲಿ 465 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ 1,07,019  ಸಕ್ರಿಯ ಪ್ರಕರಣಗಳಿವೆ.

ಕಳೆದ 24 ಗಂಟೆಯಲ್ಲಿ 73,58,017 ಮಂದಿಗೆ  ಲಸಿಕೆ ನೀಡಲಾಗಿದೆ. ಒಟ್ಟಾರೆ ಇಲ್ಲಿಯವರೆಗೆ 1,21,06,58,262 ಜನರಿಗೆ ಲಸಿಕೆ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss