ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಮತ್ತು ಈಜಿಪ್ಟ್ ರಾಜ್ಯಗಳ ಪ್ರವಾಸ ಮುಗಿಸಿ ತಡರಾತ್ರಿ ದೆಹಲಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಚಿವ ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಹರ್ದೀಪ್ ಸಿಂಗ್ ಪುರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ಮಣಿಪುರ ಹಿಂಸಾಚಾರ, ಅಸ್ಸಾಂ-ಹಿಮಾಚಲ ಪ್ರದೇಶದಲ್ಲಿ ಪ್ರವಾಹದ ಕುರಿತು ಚರ್ಚಿಸಿರುವ ಸಾಧ್ಯತೆಯಿದೆ. ಇಂದು ಮುಂಜಾನೆ ಕೂಡ ಶಾ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಮಣಿಪುರದ ಬೆಳವಣಿಗೆಗಳ ಬಗ್ಗೆ ವಿವರಿಸಿದರು. ಭಾನುವಾರ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ರಾಜ್ಯದಲ್ಲಿ “ವಿಕಸಿಸುತ್ತಿರುವ ಪರಿಸ್ಥಿತಿ” ಕುರಿತು ಶಾಗೆ ವಿವರಿಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಿಂಸಾಚಾರವನ್ನು ಹೆಚ್ಚಿನ ಮಟ್ಟಿಗೆ ನಿಯಂತ್ರಿಸಲು ಸಮರ್ಥವಾಗಿವೆ ಎಂದು ಹೇಳಿದರು.
ಮಣಿಪುರದ ಪ್ರಸ್ತುತ ಪರಿಸ್ಥಿತಿಯ ಕುರಿತು ಚರ್ಚಿಸಲು ಅಮಿತ್ ಶಾ ನೇತೃತ್ವದಲ್ಲಿ ಶನಿವಾರ ಸರ್ವಪಕ್ಷ ಸಭೆ ನಡೆಸಲಾಯಿತು.
ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಹಿಂಸಾಚಾರ ಪೀಡಿತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ಕರೆಯಲಾಗಿತ್ತು.