10 ವರ್ಷಗಳಲ್ಲಿ ಭಾರತದ ಚಿತ್ರಣವನ್ನೇ ಬದಲಾಯಿಸಿದ ಪ್ರಧಾನಿ ಮೋದಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

10 ವರ್ಷಗಳಲ್ಲಿ ಪ್ರಧಾನಿ ಮೋದಿ ಅವರು ಭಾರತದ ಚಿತ್ರಣವನ್ನೇ ಬದಲಾಯಿಸಿದರು ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಹೇಳಿದ್ದಾರೆ.

ಲಕ್ನೋದ ಬಿಜೆಪಿ (BJP) ರಾಜ್ಯ ಪ್ರಧಾನ ಕಚೇರಿಯಲ್ಲಿ ಮಾಧ್ಯಮ ಕೇಂದ್ರದ ಉದ್ಘಾಟನೆ ಸಂದರ್ಭದಲ್ಲಿ ಮತನಾಡುತ್ತಾ, ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂಬ ಬಲವಾದ ಆಸೆ ಜನಸಾಮಾನ್ಯರಲ್ಲಿದೆ ಎಂದು ಅವರು ಒತ್ತಿ ಹೇಳಿದರು.

ಕಳೆದ ದಶಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪರಿವರ್ತನಾಶೀಲ ಪ್ರಯತ್ನಗಳನ್ನು ಮಾಡಿದ್ದಾರೆ. ಮೋದಿ ಅವರು ದೇಶದ ಚಿತ್ರಣವನ್ನು ಗಮನಾರ್ಹವಾಗಿ ಬದಲಾಯಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಸಾಮಾನ್ಯ ಜನರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬೇಕು ಎಂಬ ಭಾವನೆ ಇದೆ. ಪ್ರಧಾನಿಯವರು ಕಳೆದ 10 ವರ್ಷಗಳಲ್ಲಿ ದೇಶದ ಚಿತ್ರಣವನ್ನು ಬದಲಾಯಿಸಿದ್ದಾರೆ. ಅಲ್ಲದೇ ಅವರು ಮಾಡಿರುವ ಸಕಾರಾತ್ಮಕ ಪ್ರಯತ್ನಗಳು ಭಾರತದ ಜನರ ಬೆಂಬಲವನ್ನು ಗಳಿಸಿವೆ ಎಂದು ಯೋಗಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!