ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಧ್ಯಮಗಳೊಂದಿಗೆ ಚಿಟ್ ಚಾಟ್ ನಡೆಸಲಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಪ್ರಾರಂಭದಲ್ಲಿ ಮೋದಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸುವ ಸಾಧ್ಯತೆಯಿದೆ ಎಂದು ಸಂಸತ್ತಿನ ಕಾರ್ಯದರ್ಶಿ ತಿಳಿಸಿದ್ದಾರೆ. ಸ್ವಾಭಾವಿಕವಾಗಿ, ಸಂಸತ್ತಿನ ಅಧಿವೇಶನಗಳ ಮೊದಲು ಪ್ರಧಾನಿ ಮಾಧ್ಯಮಗಳೊಂದಿಗೆ ಮಾತನಾಡುವುದು ವಾಡಿಕೆ. ಅದರ ಭಾಗವಾಗಿ ಬುಧವಾರ ಮಾಧ್ಯಮದವರೊಂದಿಗೆ ಮೋದಿ ಕೆಲಕಾಲ ಮಾತನಾಡಲಿದ್ದಾರೆ.
ಸಂಸತ್ತಿನ ಅಧಿವೇಶನಗಳು ಡಿಸೆಂಬರ್ 7 ರಿಂದ 29 ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಸರ್ಕಾರ 16 ಹೊಸ ಮಸೂದೆಗಳನ್ನು ಮಂಡಿಸಲು ಪ್ರಯತ್ನಿಸುತ್ತಿದೆ.
ಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ದೇಶದ ಆರ್ಥಿಕ ಪರಿಸ್ಥಿತಿ, ಬೆಲೆ ಏರಿಕೆ, ಚೀನಾ ಗಡಿಯಲ್ಲಿನ ಬಿಕ್ಕಟ್ಟು ಮುಂತಾದ ವಿಷಯಗಳಲ್ಲಿ ಕೇಂದ್ರ ಸರ್ಕಾರವನ್ನು ಪೇಚಿಗೆ ತಳ್ಳಲು ಯತ್ನಿಸಲಿವೆ . ಸರ್ವಪಕ್ಷ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ, ಜನಸಂಖ್ಯಾ ನಿಯಂತ್ರಣ ಮಸೂದೆಯಂತಹ ವಿಷಯಗಳ ಬಗ್ಗೆಯೂ ಚರ್ಚೆ ನಡೆದಿದೆ.