ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆ ಪ್ರಧಾನಿ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗುವ ಸಾಧ್ಯತೆ ಇದ್ದು, ರಾಜ್ಯದ ಬರಕ್ಕೆ ಕೇಂದ್ರದಿಂದ ನೆರವು ಸಿಗಲಿದೆಯೇ ಎನ್ನುವ ಪ್ರಶ್ನೆ ಎಲ್ಲರಲ್ಲೂ ಎದುರಾಗಿದೆ.
ನಾಳೆಯಿಂದ ಮೂರು ದಿನ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಪ್ರಧಾನಿ ಮೋದಿ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ. ಇದಕ್ಕಾಗಿ ಪ್ರಧಾನಿ ಸಚಿವಾಲಯ ಸಮಯ ನಿಗದಿ ಮಾಡಿದೆ ಎಂದು ಹೇಳಲಾಗಿದೆ.
ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಭೇಟಿ ವೇಳೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬರ ಪರಿಹಾರದ ಬಗ್ಗೆ ಮನವಿ ಮಾಡಲಿದ್ದಾರೆ.
ಡಿ.21ರಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ ಸಭೆ ನಡೆಯಲಿದೆ. ಅದಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.