Saturday, October 1, 2022

Latest Posts

ಸಚಿವ ಉಮೇಶ್‌ ಕತ್ತಿ ನಿಧನ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅರಣ್ಯ ಹಾಗೂ ಆಹಾರ ಖಾತೆ ಸಚಿವ ಉಮೇಶ್‌ ಕತ್ತಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ʼ ಉಮೇಶ್ ಕತ್ತಿ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಈ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿʼ ಓಂ ಶಾಂತಿ ಎಂದು ಟ್ವೀಟ್‌ ಮಾಡಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಸಂತಾಪ ಸೂಚನೆ:

ಜನಪ್ರಿಯ ಶಾಸಕರು, ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಶ್ರೀ ಉಮೇಶ್​ ಕತ್ತಿ ಅವರು ಹಠಾತ್ ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖ ಮತ್ತು ಆಘಾತವಾಗಿದೆ.

ಸುದೀರ್ಘ ಕಾಲ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ನಾಯಕ ನಮ್ಮನ್ನಗಲಿರುವುದು ರಾಜ್ಯಕ್ಕೆ ದೊಡ್ದ ನಷ್ಟ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!