ಸಂಗೀತ ಕ್ಷೇತ್ರದ ದಿಗ್ಗಜ ಪ್ರಪುಲ್ಲ ಕರ್‌ ನಿಧನ; ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಒಡಿಯಾ ಭಾಷೆಯ ಖ್ಯಾತ ಸಂಗೀತಗಾರ ಮತ್ತು ಗಾಯಕರಾದ ಪ್ರಫುಲ್ಲ ಕರ್ (83) ನಿಧನರಾಗಿದ್ದಾರೆ.
ಭುವನೇಶ್ವರದ ಸತ್ಯನಗರ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಕರ್‌ ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ. ಅವರು ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಗೀತರಚನೆಗಾರ, ಸಂಗೀತಗಾರ, ಗಾಯಕರಾಗಿ ಪ್ರಫುಲ್ಲ ಕರ್ ಭಾರತೀಯ ಸಂಗೀತ ಕ್ಷೇತ್ರದಲ್ಲಿ ಮಹಾನ್‌ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಅವರು ಒಡಿಯಾ ಭಾಷೆಯಲ್ಲಿ ಪ್ರಮುಖವಾಗಿ ಸಂಗೀತ ರಚನೆಗಳನ್ನು ಮಾಡಿದರೂ ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿದ್ದರು. ಸಂಗೀತ ಕ್ಷೇತ್ರದಲ್ಲಿ ತಮ್ಮ ಅದ್ವಿತೀಯ ಸಾಧನೆಗಳಿಗಾಗಿ 2015 ರಲ್ಲಿ ಪದ್ಮಶ್ರೀ ಪುರಸ್ಕಾರಕ್ಕೆ ಪಾತ್ರರಾಗಿದ್ದರು.

ಪ್ರಫುಲ್ಲ ಕರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್‌ ಅವರು ಬಹುಮುಖಿ ವ್ಯಕ್ತಿತ್ವ ಹೊಂದಿದ್ದರು. ಅವರ ನಿಧನವು ದುಃಖ ತಂದಿದೆ. ಅವರ ಸೃಜನಶೀಲತೆ ಅವರ ಕೃತಿಗಳಲ್ಲಿ ಪ್ರತಿಫಲಿಸುತ್ತದೆ. ಒಡಿಯಾ ಸಂಸ್ಕೃತಿ ಮತ್ತು ಸಂಗೀತಕ್ಷೇತ್ರಕ್ಕೆ ಕರ್ ಅವರ ಅಪ್ರತಿಮ ಕೊಡುಗೆಗಾಗಿ ಅವರು ಸ್ಮರಣಾರ್ಹರು. ಅವರ ನಿಧನಕ್ಕೆ ಸಂತಾಪಗಳು.. ಓಂ ಶಾಂತಿ ಎಂದು ಪ್ರಧಾನಿ ಮೋದಿ ಟ್ವಿಟ್‌ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!