Thursday, September 29, 2022

Latest Posts

ಪೂಂಚ್‌ ಜಿಲ್ಲೆಯ ಮಿನಿ ಬಸ್‌ ಅಪಘಾತ: ಪ್ರಧಾನಿ ಸಂತಾಪ, 2ಲಕ್ಷ ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ ಮತ್ತು ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಘೋಷಣೆ ಮಾಡಿದ್ದಾರೆ.

ಸಾವ್ಜಿಯಾನ್‌ನಿಂದ ಮಂಡಿಗೆ ತೆರಳುತ್ತಿದ್ದ ಮಿನಿ ಬಸ್ ಅಪಘಾತಕ್ಕೀಡಾಗಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು, 26 ಮಂದಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಇನ್ನೂ ಭಾರತೀಯ ಸೇನೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ʻಪೂಂಚ್‌ನಲ್ಲಿ ಅಪಘಾತದಿಂದ ಜೀವಹಾನಿಯಾಗಿದ್ದು ದುಃಖಕರವಾಗಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. PMNRF ನಿಂದ 2 ಲಕ್ಷ ರೂ. ಮೃತರ ಮುಂದಿನ ಕುಟುಂಬಕ್ಕೆ ನೀಡಲಾಗುವುದು ಮತ್ತು ಗಾಯಗೊಂಡವರಿಗೆ ರೂ 50,000 ನೀಡಲಾಗುವುದು ಎಂದು ಪ್ರಧಾನಿ ಕಚೇರಿ (ಪಿಎಂಒ) ಟ್ವೀಟ್‌ನಲ್ಲಿ ತಿಳಿಸಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಸಂತಾಪ ಸೂಚಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸಂಭವಿಸಿದ ದುರಂತ ತೀವ್ರ ದುಃಖಕರವಾಗಿದೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.

ಜೆ-ಕೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕೂಡ ಸಂತಾಪ ಸೂಚಿಸಿದರು ಮತ್ತು ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ಮತ್ತು ಗಾಯಗೊಂಡ ವ್ಯಕ್ತಿಗಳಿಗೆ ಪರಿಹಾರದ ಭರವಸೆ ನೀಡಿದರು. ಪೂಂಚ್‌ನ ಸಾವ್ಜಿಯಾನ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಪ್ರಾಣಹಾನಿಯಿಂದ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಸಿನ್ಹಾ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಮೃತರ ಸಂಬಂಧಿಕರಿಗೆ 5 ಲಕ್ಷ ರೂಪಾಯಿ ಮತ್ತು ಗಾಯಗೊಂಡ 26 ಮಂದಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡುವ ಭರವಸೆ ನೀಡಿದರು.

ಗಾಯಾಳುಗಳಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆ ನೀಡುವಂತೆ ಸಿನ್ಹಾ ಪೊಲೀಸ್ ಮತ್ತು ಸಿವಿಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!