ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ಬಿ.ಸರೋಜಾದೇವಿಯವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಖ್ಯಾತ ನಟಿ, ಅಭಿನಯ ಸರಸ್ವತಿ ಬಿ.ಸರೋಜಾದೇವಿ ಅವರ ನಿಧನದ ಸುದ್ದಿ ಕೇಳಿ ತುಂಬಾ ನೋವಾಗಿದೆ. ಭಾರತೀಯ ಸಿನಿಮಾ ಹಾಗೂ ಸಂಸ್ಕೃತಿಯ ಆದರ್ಶ ಮೂರ್ತಿ ಅವರು, ತಮ್ಮ ವೈವಿಧ್ಯಮಯ ನಟನೆಯಿಂದಲೇ ತಲೆಮಾರುಗಳಲ್ಲಿ ಅಳಿಸಲಾಗದ ಗುರುತನ್ನು ಬಿಟ್ಟು ಹೋಗಿದ್ದಾರೆ.ಬೇರೆ ಬೇರೆ ಭಾಷೆಗಳಲ್ಲಿ ತಮ್ಮ ನಟನಾ ಶೈಲಿಯ ಮೂಲಕ ಬಹುಮುಖ ಪ್ರತಿಭೆಯನ್ನು ಎತ್ತಿ ತೋರಿಸಿದ್ದಾರೆ. ದೇವರು ಅವರ ಕುಟುಂಬ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.