ಪ್ರಧಾನಿ ಮೋದಿಗೆ ಘಾನಾದ ‘The Officer of the Order of the Star of Ghana’ ಪ್ರಶಸ್ತಿ ಪ್ರದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಫ್ರಿಕನ್ ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಘಾನಾದಲ್ಲಿ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಅಕ್ರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ, ದೇಶದ ಅಧ್ಯಕ್ಷ ಮಹಾಮ ಅವರು ಪ್ರಧಾನಿ ಮೋದಿ ಅವರನ್ನು ಸನ್ಮಾನಿಸಿದರು. ಘಾನಾದಲ್ಲಿ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿಯನ್ನು ಪಡೆದ ಪ್ರಧಾನಿ ಮೋದಿ, ಘಾನಾದ ಅತ್ಯುನ್ನತ ಗೌರವವನ್ನು ಪಡೆದಿರುವುದು ನನಗೆ ಹೆಮ್ಮೆ ಮತ್ತು ಗೌರವದ ವಿಷಯ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಜುಲೈ 9 ರವರೆಗೆ ಪ್ರಧಾನಿ ಮೋದಿ ಘಾನಾ, ಟ್ರಿನಿಡಾಡ್, ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಭೇಟಿ ನೀಡಲಿದ್ದಾರೆ. ಇದು ಜಾಗತಿಕ ದಕ್ಷಿಣದ ದೇಶಗಳೊಂದಿಗೆ ಭಾರತದ ಸಂಬಂಧಗಳಿಗೆ ಹೊಸ ಆಯಾಮವನ್ನು ನೀಡುವ ನಿರೀಕ್ಷೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!