Tuesday, October 3, 2023

Latest Posts

ಚಿನ್ನ ಗೆದ್ದ ನೀರಜ್ ಚೋಪ್ರಾರನ್ನು ಅಭಿನಂದಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಸ್ಟಾರ್ ಜಾವೆಲಿನ್ ಆಟಗಾರ ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದು ಬೀಗಿದ್ದಾರೆ.

ಹಂಗೇರಿಯಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಜಾವೆಲಿನ್ ವಿಭಾಗದಲ್ಲಿ ಚಿನ್ನದ ಪದಕ ಪಡೆದು ಇತಿಹಾಸ ಸೃಷ್ಟಿಸಿದ್ದಾರೆ. ವಿಶ್ವ ಚಾಂಪಿಯನ್‌ಶಿಪ್ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ನೀರಜ್ ಚೋಪ್ರಾಗೆ ಪ್ರಧಾನಿ ಮೋದಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಬಂಗಾರ ಗೆದ್ದ ನೀರಜ್‌ಗೆ ಪ್ರಧಾನಿ ಮೋದಿ, ಕ್ರೀಡಾ ಸಚಿವ ಅನುರಾಗ್ ಠಾಕೂರ್, ಭಾರತೀಯ ಸೇನೆ ಸೇರಿ ಇನ್ನಿತರರು ಶುಭಾಶಯಗಳನ್ನು ತಿಳಿಸಿದ್ದಾರೆ.

ಶ್ರೇಷ್ಠತೆಯನ್ನು ಸಾರಿದ ನೀರಜ್ ಚೋಪ್ರಾ ಅವರಿಗೆ ಅಭಿನಂದನೆಗಳು. ನಿಖರತೆ ಹಾಗೂ ಉತ್ಸಾಹದಿಂದ ಅವರು ಅಥ್ಲೆಟಿಕ್ಸ್ ಚಾಂಪಿಯನ್ ಅಷ್ಟೇ ಅಲ್ಲ ಕ್ರೀಡಾ ಜಗತ್ತಿನಲ್ಲಿ ಅಪ್ರತಿಮ ಶ್ರೇಷ್ಠರಾಗಿದ್ದಾರೆ ಎಂದಿದ್ದಾರೆ.

 

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!