ಕೆನಡಾ ಚುನಾವಣೆಯಲ್ಲಿ ಮಾರ್ಕ್‌ ಕಾರ್ನಿ ಗೆ ಗೆಲುವು: ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆನಡಾ ಚುನಾವಣೆಯಲ್ಲಿ ಲಿಬರಲ್ ಪಕ್ಷವು ಗೆಲುವಿನತ್ತ ಸಾಗಿದ್ದು,ಮಾರ್ಕ್‌ ಕಾರ್ನಿ ಲಿಬರಲ್‌ ಪಕ್ಷವನ್ನು ಸತತ 4ನೇ ಬಾರಿಗೆ ಅಧಿಕಾರಕ್ಕೆ ತರಲು ಯಶಸ್ವಿಯಾಗಿದ್ದಾರೆ.

ಜಸ್ಟಿನ್‌ ಟ್ರುಡೋ ಅವರ ರಾಜೀನಾಮೆಯಿಂದ ತೆರವಾದ ಪ್ರಧಾನಿ ಸ್ಥಾನಕ್ಕೆ ಈ ವರ್ಷದ ಮಾರ್ಚ್‌ನಲ್ಲಿ ಮಾರ್ಕ್‌ ಕಾರ್ನಿ ಆಯ್ಕೆಯಾಗಿದ್ದರು. ಇದೀಗ ಅವರು ಪಕ್ಷವನ್ನು ಜಯದತ್ತ ಕೊಂಡೊಯ್ದಿದ್ದು, ಭಾರತದ ಪ್ರದಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಜತೆಗೆ ಉಭಯ ದೇಶಗಳ ನಡುವಿನ ಸಂಬಂಧವನ್ನು ಇನ್ನಷ್ಟು ಬಲಪಡಿಸಲು ಎದುರು ನೋಡುತ್ತಿರವುದಾಗಿ ತಿಳಿಸಿದ್ದಾರೆ.

‘ಕೆನಡಾದ ಪ್ರಧಾನಿಯಾಗಿ ಆಯ್ಕೆಯಾದ ಮಾರ್ಕ್ ಕಾರ್ನಿ ಮತ್ತು ಗೆಲುವು ಸಾಧಿಸಿದ ಲಿಬರಲ್ ಪಕ್ಷಕ್ಕೆ ಅಭಿನಂದನೆಗಳು. ಭಾರತ ಮತ್ತು ಕೆನಡಾ ಪ್ರಜಾಪ್ರಭುತ್ವ ಮೌಲ್ಯ ಮತ್ತು ಜನರ ನಡುವಿನ ಪರಸ್ಪರ ಸಹಕಾರ ಹೆಚ್ಚಿಸಲು ಬದ್ಧವಾಗಿದೆ’ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಜತೆಗೆ ಉಭಯ ರಾಷ್ಟ್ರಗಳ ಸಂಬಂಧವನ್ನು ವೃದ್ಧಿಸಲು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ.

2023ರಲ್ಲಿ ನಡೆದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಬಳಿಕ ಹದಗೆಟ್ಟಿದ್ದ ಭಾರತ ಮತ್ತು ಕೆನಡಾ ಸಂಬಂಧ ಸುಧಾರಣೆಯ ಲಕ್ಷಣಗಳು ಕಾಣುತ್ತಿವೆ. ಲಿಬರಲ್ ಪಕ್ಷದ ಗೆಲುವು ಅಂತಾರಾಷ್ಟ್ರೀಯ ಸಂಬಂಧವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.

ಕೆನಡಾದ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಅಧಿಕಾರಾವಧಿಯಲ್ಲಿ ದಿಲ್ಲಿ ಮತ್ತು ಒಟ್ಟಾವಾ ನಡುವಿನ ದ್ವಿಪಕ್ಷೀಯ ಸಂಬಂಧಗಳಲ್ಲಿಸಾಕಷ್ಟು ಬಿರುಕು ಮೂಡಿತ್ತು. ಇದನ್ನೇ ಅಸ್ತ್ರವಾಗಿ ಮಾಡಿಕೊಂಡ ಕಾರ್ನಿ ತಮ್ಮ ಚುನಾವಣಾ ಪ್ರಚಾರದಲ್ಲಿ ಭಾರತದೊಂದಿಗೆ ಕೆನಡಾ ಸಂಬಂಧವನ್ನು ಪುನರ್ನಿರ್ಮಿಸುವುದು ತಮ್ಮ ಆದ್ಯತೆ ಎಂದು ಹೇಳಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!