Tuesday, June 28, 2022

Latest Posts

ನೂತನ ಸಿಎಂ ಬಸವರಾಜ ಬೊಮ್ಮಾಯಿಯನ್ನು ಅಭಿನಂದಿಸಿದ ಪ್ರಧಾನಿ ಮೋದಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಇಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಕರ್ನಾಟಕದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಅವರು ತಮ್ಮ ಶ್ರೀಮಂತ ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವವನ್ನು ತಮ್ಮೊಂದಿಗೆ ತರುತ್ತಾರೆ. ನಮ್ಮ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಮಾಡಿದ ಅಸಾಧಾರಣ ಕಾರ್ಯಗಳನ್ನು ಅವರು ಮುಂದುವರೆಸುತ್ತಾರೆಂಬ ವಿಶ್ವಾಸವಿದೆ ಎಂದಿದ್ದಾರೆ”

ಇನ್ನೊಂದು ಟ್ವೀಟ್ ನಲ್ಲಿ “ನಮ್ಮ ಪಕ್ಷಕ್ಕೆ ಮತ್ತು ಕರ್ನಾಟಕದ ಬೆಳವಣಿಗೆಗೆ ಬಿ.ಎಸ್.ಯಡಿಯೂರಪ್ಪ ಅವರು ನೀಡಿರುವ ಕೊಡುಗೆಗಳನ್ನು ಪದಗಳಲ್ಲಿ ವರ್ಣಿಸಲಾಗುತ್ತಿಲ್ಲ. ಪದಗಳಲ್ಲಿ ವರ್ಣಿಸಿದರೆ ಅವರ ಕೊಡುಗೆಗೆ ನ್ಯಾಯ ಒದಗಿಸಿದಂತಾಗುವುದಿಲ್ಲ.  ದಶಕಗಳ ಕಾಲ ಅವರು ಕಷ್ಟಪಟ್ಟು ದುಡಿದು, ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಸಂಚರಿಸಿ ಜನರೊಂದಿಗೆ ಸ್ವರಮೇಳವನ್ನು ಮಾಡಿದರು. ಸಾಮಾಜಿಕ ಕಲ್ಯಾಣಕ್ಕಾಗಿ ಅವರ ಬದ್ಧತೆ ಎಲ್ಲರು ಮೆಚ್ಚುವಂತದ್ದು” ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಹೊಗಳಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss