ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿಪಕ್ಷಗಳ ಬಹಿಷ್ಕಾರದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಇಂದು ನೂತನ ಸಂಸತ್ ಭವನವನ್ನು ಉದ್ಘಾಟಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಅವರನ್ನು ಅವಮಾನಿಸಲಾಗಿದೆ ಎಂದು ಪ್ರತಿಪಕ್ಷಗಳು ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿವೆ. ಇದರ ನಡುವೆಯೂ ಐತಿಹಾಸಿಕ ನೂತನ ಸಂಸತ್ ಭವನ ಇಂದು ಲೋಕಾರ್ಪಣೆಗೊಂಡಿದೆ.
ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಸಂಸತ್ತು ಜನರ ಧ್ವನಿ! ಸಂಸತ್ ಭವನದ ಉದ್ಘಾಟನೆಯನ್ನು ಪ್ರಧಾನಿ ರಾಜ್ಯಾಭಿಷೇಕ ಎಂದು ಭಾವಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
https://twitter.com/RahulGandhi/status/1662711995660107778?s=20