ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ ಶೋಕ ಸಂದೇಶ ಕಳಿಸಿದ್ದಾರೆ.
ಕೇಂದ್ರ ಸರ್ಕಾರದ ಪರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಅವರ ಮೂಲಕ ಪ್ರಧಾನಿ ಮೋದಿ ಸಂತಾಪ ಪತ್ರ ರವಾನಿಸಿದ್ದು, ಸಚಿವ ಜೋಶಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರೊಂದಿಗೆ ಪ್ರಧಾನಿಯವರ ಸಂತಾಪ ಪತ್ರವನ್ನು ಎಸ್.ಎಂ.ಕೃಷ್ಣ ಅವರ ಪತ್ನಿಗೆ ತಲುಪಿಸಿದ್ದಾರೆ.
ಸಚಿವ ಪ್ರಹ್ಲಾದ್ ಜೋಶಿ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಆಗಮಿಸಿ ಎಸ್.ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿದರು.