ಮಣಿಪುರ ಕುರಿತು ಕೋಪಗೊಂಡಿದ್ದರೆ ಪ್ರಧಾನಿ ಮೋದಿ ಸಿಎಂ ಬಿರೇನ್ ಸಿಂಗ್ ಅನ್ನು ವಜಾ ಮಾಡಬಹುದಿತ್ತು: ಖರ್ಗೆ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಣಿಪುರದಲ್ಲಿ ಹಿಂಸಾಚಾರ ವಿವಿಧ ರೂಪವನ್ನು ಪಡೆಯುತ್ತಿದ್ದು, ಇದರ ಬೆನ್ನಲ್ಲೇ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಖರ್ಗೆ ಜನ್ಮದಿನದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ ಅವರು, ಪ್ರತ್ಯೇಕ ಟ್ವೀಟ್‌ನಲ್ಲಿ ವಾಗ್ದಾಳಿ ನಡೆಸಿದರು.

ಮಣಿಪುರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಮೋದಿ (Narendra Modi) ನಿಜವಾಗಿಯೂ ಕೋಪಗೊಂಡಿದ್ದರೆ,ಅವರು ಮೊದಲು ಮುಖ್ಯಮಂತ್ರಿ ಬಿರೇನ್ ಸಿಂಗ್ (N Biren Singh) ಅವರನ್ನು ವಜಾ ಮಾಡಬಹುದಿತ್ತು ಎಂದು ಹೇಳಿದ್ದಾರೆ.

ನಿಮ್ಮ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೇತೃತ್ವದಲ್ಲಿ 80 ದಿನಗಳ ಕಾಲ ನಡೆದ ಹಿಂಸಾಚಾರದ ಬಗ್ಗೆ ಸಂಪೂರ್ಣ ಅಸಹಾಯಕ ಮತ್ತು ಪಶ್ಚಾತ್ತಾಪವಿಲ್ಲದೆ ವಿಸ್ತೃತವಾದ ಹೇಳಿಕೆಯನ್ನು ನೀಡಬೇಕೆಂದು ವಿಪಕ್ಷಗಳ ಒಕ್ಕೂಟ ಇಂಡಿಯಾ ಬಯಸುತ್ತಿದೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!