ಬ್ರೆಜಿಲ್‌ನ ಸರ್ಕಾರಿ ಕಟ್ಟಡಗಳ ಮೇಲೆ ದಾಳಿ: ಅಧಿಕಾರಿಗಳಿಗೆ ಪ್ರಧಾನಿ ಮೋದಿ ಬೆಂಬಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬ್ರೆಜಿಲ್‌ನಲ್ಲಿ ಪ್ರತಿಭಟನಾಕಾರರು ರಾಷ್ಟ್ರೀಯ ಕಾಂಗ್ರೆಸ್ ಭವನ, ಸರ್ಕಾರಿ ಕಚೇರಿಗಳಿಗೆ ನುಗ್ಗಿ ಅಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿರುವ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಕುರಿತು ಪ್ರಧಾನಿ ಮೋದಿ ಸೇರಿದಂತೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಘಟನೆಗಳು ಮಾರಕ ಎಂದು ಜಗತ್ತಿನಾದ್ಯಂತ ಇತರೆ ನಾಯಕರು ಟೀಕಿಸುತ್ತಿದ್ದಾರೆ. ಬ್ರೆಜಿಲ್‌ನಲ್ಲಿ 2022 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಬೋಲ್ಸನಾರೊ ಸೋತ ಬಳಿಕ ಈ ಪ್ರತಿಭಟನೆಗಳು ನಡೆಯುತ್ತಿವೆ.

ರಾಜಕೀಯ ವಿಚಾರದಲ್ಲಿ ತಮ್ಮ ದೇಶದ ಸೇನೆ ಮಧ್ಯಪ್ರವೇಶಿಸಿ ಪರಿಸ್ಥಿತಿ ಸುಧಾರಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ರಾಷ್ಟ್ರಪತಿ ಚುನಾವಣೆಯನ್ನು ಪ್ರಜಾಸತ್ತಾತ್ಮಕವಾಗಿ ನಡೆಸಲಾಗಿಲ್ಲ ಎಂದು ಆರೋಪಿಸಿದ್ದಲ್ಲದೆ ರಾಷ್ಟ್ರಪತಿ ಭವನಕ್ಕೆ ತೆರಳಿ ಧ್ವಂಸ ಮಾಡಿ ಗೊಂದಲ ಸೃಷ್ಟಿಸಿದರು.

ಬ್ರೆಜಿಲ್‌ನಲ್ಲಿ ನಡೆಯುತ್ತಿರುವ ದೊಡ್ಡ ಮಟ್ಟದ ಪ್ರತಿಭಟನೆಗೆ ಭಾರತದ ಪ್ರಧಾನಿ ಮೋದಿ ಕೂಡ ಸ್ಪಂದಿಸಿದ್ದಾರೆ. ‘ಬ್ರೆಸಿಲಿಯಾದಲ್ಲಿ ಸರ್ಕಾರಿ ವ್ಯವಸ್ಥೆಗಳ ಮೇಲಿನ ದಾಳಿಯಿಂದ ಕಳವಳಗೊಂಡಿದ್ದೇನೆ. ಪ್ರಜಾಪ್ರಭುತ್ವ ಸಂಪ್ರದಾಯಗಳನ್ನು ಎಲ್ಲರೂ ಗೌರವಿಸಬೇಕು. ನಾವು ಬ್ರೆಜಿಲ್ ಅಧಿಕಾರಿಗಳಿಗೆ ನಮ್ಮ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಬ್ರೆಜಿಲ್‌ನಲ್ಲಿ ನಡೆದ ಘಟನೆಗಳನ್ನು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಕೂಡ ಖಂಡಿಸಿದ್ದಾರೆ. ಅಲ್ಲದೆ, ಇಂತಹ ದಾಳಿಗಳು ಸೂಕ್ತವಲ್ಲ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗುಟೆರಸ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!