Friday, September 30, 2022

Latest Posts

ಮೈಸೂರು ದಸರಾ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಬರೋದಿಲ್ಲ: ಪಿಎಂ ಕಚೇರಿ ಮಾಹಿತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಿಶ್ವವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಬರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದೀಗ ಪ್ರಧಾನಿ ಮೋದಿ ದಸರಾ ಮಹೋತ್ಸವಕ್ಕೆ ಬರೋದಿಲ್ಲ ಎಂಬುದಾಗಿ ಪಿಎಂ ಕಚೇರಿಯಿಂದ ಸಿಎಂ ಕಚೇರಿಗೆ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ.
ಈ ಕುರಿತಂತೆ ಪಿಎಂ ಕಚೇರಿಯ ಉನ್ನತ ಮೂಲಗಳಿಂದ ತಿಳಿದು ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳ ಪಟ್ಟಿಯಲ್ಲಿ ಬದಲಾವಣೆಯಾಗಿದೆ. ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಬರುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಚೇರಿಗೆ ಪಿಎಂ ಕಚೇರಿಯಿಂದ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ.
ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಕಾರ್ಯಕ್ರಮ ಉದ್ಘಾಟನೆಗೆ ಪ್ರಧಾನಿ ಮೋದಿಯವರು ಈ ಬಾರಿ ಆಗಮಿಸಲಿದ್ದಾರೆ ಎನ್ನಲಾಗಿತ್ತು. ಸಿಎಂ ಬೊಮ್ಮಾಯಿ ಕೂಡ ಈ ಮಾಹಿತಿಯನ್ನು ತಿಳಿಸಿದ್ದರು. ಆದ್ರೇ ಅಧಿಕೃತಗೊಂಡಿಲ್ಲ ಎಂದು ಹೇಳಿದ್ದರು. ಈ ಬೆನ್ನಲ್ಲೇ ಪಿಎಂ ಕಚೇರಿಯ ಉನ್ನತ ಮೂಲಗಳಿಂದ ಅವರು ಬರೋದಿಲ್ಲ ಎಂಬುದಾಗಿ ತಿಳಿದು ಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!