ಭೋಪಾಲ್-ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಭೋಪಾಲ್-ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.

ಸಂಯೋಜಿತ ಕಮಾಂಡರ್‌ಗಳ ಸಮ್ಮೇಳನದಲ್ಲಿಯೂ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಬೆಳಗ್ಗೆ ಭೋಪಾಲ್‌ಗೆ ಭೇಟಿ ನೀಡಲಿದ್ದು, 10 ಗಂಟೆಗೆ ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಲಿದ್ದಾರೆ.

ನಂತರ ಮಧ್ಯಾಹ್ನ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿದ್ದಾರೆ. ಭೋಪಾಲ್ ಮತ್ತು ನವದೆಹಲಿ ರೈಲು ನಿಲ್ದಾಣಗಳ ನಡುವೆ ಉದ್ಘಾಟನೆಯಾಗಲಿರುವ ಹೊಸ ರೈಲು ದೇಶದ 11 ನೇ ವಂದೇ ಭಾರತ್ ರೈಲು ಆಗಲಿದೆ.

ಅತ್ಯಾಧುನಿಕ ಸೌಕರ್ಯ ಹೊಂದಿರುವ ರೈಲಿನಲ್ಲಿ ವೇಗ, ಆರಾಮದಾಯಕ ಪ್ರಯಾಣದ ಅನುಭವ ಸಿಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!