ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಇಂದು ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.
ಅಜ್ಮೀರ್-ದೆಹಲಿ ಕಂಟೋನ್ಮೆಂಟ್ ಮಾರ್ಗದಲ್ಲಿ ಸಂಚರಿಸಲಿರುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಇದಾಗಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿದ್ದಾರೆ.

ಈ ಮಾರ್ಗದಲ್ಲಿ ಓಡಾಡುತ್ತಿರುವ ಪ್ರಸ್ತುತ ವೇಗದ ರೈಲಿಗಿಂತ ಒಂದು ಗಂಟೆ ಮುಂಚಿತವಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ತನ್ನ ಪ್ರಯಾಣ ಮುಗಿಸಲಿದೆ.

ಗುರುವಾರದಿಂದ ಸೇವೆಗಳು ಆರಂಭವಾಗಲಿದ್ದು, ಜೈಪುರ, ಅಲ್ವಾರ್ ಮತ್ತು ಗುರುಗ್ರಾಮದಲ್ಲಿ ನಿಲುಗಡೆ ಹೊಂದಿದೆ. ಪ್ರಸ್ತುತ ಶತಾಬ್ದಿ ದೆಹಲಿಯಿಂದ ಅಜ್ಮೀರ್ ತಲುಪಲು 6 ಗಂಟೆ 15 ನಿಮಿಷ ತೆಗೆದುಕೊಳ್ಳುತ್ತದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಈ ದೂರವನ್ನು 5 ಗಂಟೆ 15 ನಿಮಿಷದಲ್ಲಿ ಕ್ರಮಿಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!