ಮೊರಾಕೋ ಭೂಕಂಪದಲ್ಲಿ 200ಕ್ಕೂ ಅಧಿಕ ಮಂದಿ ಸಾವು: ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಾಷಿಂಗ್ಟನ್‌ನ ಮೊರಾಕೋದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಭೂಕಂಪದಲ್ಲಿ 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಮೃತರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವಿಟ್ಟರ್‌ನಲ್ಲಿ ‘ಮೊರಾಕೋದಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಹಲವರು ಪ್ರಾಣ ಕಳೆಕೊಂಡಿರುವುದು ತೀವ್ರ ನೋವಾಗಿದೆ. ಈ ದುರಂತದಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಈ ಸಮಯದಲ್ಲಿ ಮೊರಾಕೊಗೆ ಅಗತ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಿದೆ. ನಿಮ್ಮೊಂದಿಗೆ ನಾವಿದ್ದೇವೆʼ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ಮೊರಾಕೊದಲ್ಲಿ ಶುಕ್ರವಾರ ತಡರಾತ್ರಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ರಾತ್ರಿ 11 ಗಂಟೆಯ ನಂತರ ಮುರಕೇಶ್‌ನ ನೈಋತ್ಯಕ್ಕೆ 44 ಮೈಲಿ ದೂರದಲ್ಲಿ ಈ ದುರಂತ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು 18.5 ಕಿಮೀ ಆಳದಲ್ಲಿ ಗುರುತಿಸಲಾಗಿದೆ. ಭೂಕಂಪದಿಂದಾಗಿ ನಗರದ ಕಟ್ಟಡಗಳು ಹಾನಿಗೊಳಗಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!