ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬುಧವಾರ, ಬ್ರೆಜಿಲ್ ಸೇರಿದಂತೆ ಐದು ದೇಶಗಳಿಗೆ ಒಂದು ವಾರದ ಭೇಟಿಗಾಗಿ ಪ್ರಯಾಣ ಬೆಳೆಸಿದ್ದು, ಘಾನಾ ದೇಶಕ್ಕೆ ತಲುಪಿದ್ದಾರೆ.
ಘಾನಾದ ಅಕ್ರಾದಲ್ಲಿ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಅಧ್ಯಕ್ಷ ಜಾನ್ ಡ್ರಾಮಾನಿ ಮಹಾಮ ಅವರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.
ಈ ಕುರಿತು ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಘಾನಾದ ಅಕ್ರಾದಲ್ಲಿ ಬಂದಿಳಿದಿದ್ದೇನೆ. ವಿಮಾನ ನಿಲ್ದಾಣದಲ್ಲಿ ನನ್ನನ್ನು ಸ್ವಾಗತಿಸಿದ ಅಧ್ಯಕ್ಷ ಜಾನ್ ಡ್ರಾಮಾನಿ ಮಹಾಮ ಅವರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ನಮ್ಮ ದೀರ್ಘಕಾಲದ ಸಂಬಂಧವನ್ನು ಬಲಪಡಿಸಲು ಮತ್ತು ಸಹಯೋಗಕ್ಕಾಗಿ ಹೊಸ ಮಾರ್ಗಗಳನ್ನು ಅನ್ವೇಷಿಸಲು ನಮ್ಮ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿವೆ ಎಂದು ತಿಳಿಸಿದ್ದಾರೆ.