`ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಚಾಲನೆ: ರೈಲಿನ ವೈಶಿಷ್ಟ್ಯಗಳೇನು ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗಾಂಧಿನಗರ-ಮುಂಬೈ ಸೆಂಟ್ರಲ್ ಮಾರ್ಗದ ʻವಂದೇ ಭಾರತ್ʼ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಗುಜರಾತ್‌ನ ಗಾಂಧಿನಗರದಲ್ಲಿ ಚಾಲನೆ ನೀಡಿದರು. ವಂದೇ ಭಾರತ್ ರೈಲು ದೇಶದ ಮೂರನೆಯದಾಗಿದ್ದು, ಇತರ ಎರಡನ್ನು ನವದೆಹಲಿ – ವಾರಣಾಸಿ ಮತ್ತು ನವದೆಹಲಿ – ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ ನಡುವೆ ಓಡಿಸಲಾಗುತ್ತಿದೆ.

ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಗಾಂಧಿನಗರ ಮತ್ತು ಮುಂಬೈ ನಡುವೆ ಓಡಲಿದ್ದು, ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳ ರಾಜಧಾನಿಗಳನ್ನು ಸಂಪರ್ಕಿಸುತ್ತದೆ. ಭಾನುವಾರ ಹೊರತುಪಡಿಸಿ ವಾರದಲ್ಲಿ 6 ದಿನ ರೈಲು ಸಂಚರಿಸಲಿದೆ. ವಂದೇ ಭಾರತ್ ರೈಲು 20901, ಮುಂಬೈ ಸೆಂಟ್ರಲ್‌ನಿಂದ ಬೆಳಿಗ್ಗೆ 6.10 ಕ್ಕೆ ಹೊರಟು ಮಧ್ಯಾಹ್ನ 12.30 ಕ್ಕೆ ಗಾಂಧಿನಗರ ತಲುಪಲಿದೆ, ಮುಂಬೈಗೆ ಹಿಂತಿರುಗುವ ರೈಲು- 20902 ಗಾಂಧಿನಗರ ರಾಜಧಾನಿ ನಿಲ್ದಾಣದಿಂದ ಮಧ್ಯಾಹ್ನ 2.05 ಕ್ಕೆ ಹೊರಟು ರಾತ್ರಿ 8.35 ಕ್ಕೆ ಮುಂಬೈ ಸೆಂಟ್ರಲ್ ತಲುಪಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

16 ಕೋಚ್‌ಗಳನ್ನು ಹೊಂದಿರುವ ರೈಲು 1,128 ಪ್ರಯಾಣಿಕರ ಆಸನ ಸಾಮರ್ಥ್ಯವನ್ನು ಹೊಂದಿದೆ ಮತ್ತು ಗಾಂಧಿನಗರ ರಾಜಧಾನಿ ನಿಲ್ದಾಣವನ್ನು ತಲುಪುವ ಮೊದಲು ಸೂರತ್, ವಡೋದರಾ ಮತ್ತು ಅಹಮದಾಬಾದ್ ಎಂಬ ಮೂರು ನಿಲ್ದಾಣಗಳಲ್ಲಿ ನಿಲ್ಲುತ್ತದೆ. ಈ ರೈಲಿನಲ್ಲಿ ಒರಗುವ ಆಸನಗಳು, ಸ್ವಯಂಚಾಲಿತ ಅಗ್ನಿ ಸಂವೇದಕಗಳು, ಸಿಸಿಟಿವಿ ಕ್ಯಾಮೆರಾಗಳು, ವೈಫೈ ಸೌಲಭ್ಯದೊಂದಿಗೆ ಮೂರು ಗಂಟೆಗಳ ಬ್ಯಾಟರಿ ಬ್ಯಾಕಪ್ ಮತ್ತು ಜಿಪಿಎಸ್ ವ್ಯವಸ್ಥೆಗಳು ಸೇರಿದಂತೆ ಸುಧಾರಿತ ವೈಶಿಷ್ಟ್ಯಗಳನ್ನು ಹೊಂದಿದ್ದು ಪ್ರಯಾಣವನ್ನು ಸುರಕ್ಷಿತ ಮತ್ತು ಹೆಚ್ಚು ಆರಾಮದಾಯಕವಾಗಿಸುತ್ತದೆ

ಚೆನ್ನೈನಲ್ಲಿರುವ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF) ಆಗಸ್ಟ್ 2023 ರ ವೇಳೆಗೆ 75 ವಂದೇ ಭಾರತ್ ರೈಲುಗಳನ್ನು ತಯಾರಿಸುವ ಗುರಿಯನ್ನು ಹೊಂದಿದೆ. ರೈಲುಗಳು ಗಾಳಿಯ ಶುದ್ಧೀಕರಣಕ್ಕಾಗಿ ರೂಫ್-ಮೌಂಟೆಡ್ ಪ್ಯಾಕೇಜ್ ಘಟಕದಲ್ಲಿ (RMPU) ಫೋಟೋಕ್ಯಾಟಲಿಟಿಕ್ ನೇರಳಾತೀತ ಗಾಳಿ ಶುದ್ಧೀಕರಣ ವ್ಯವಸ್ಥೆಯನ್ನು ಸಹ ಹೊಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!