ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಮೇಡ್ ಇನ್ ಇಂಡಿಯಾ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದು, ಇದರ ಫೋಟೊಸ್ ಎಲ್ಲೆಡೆ ವೈರಲ್ ಆಗಿದೆ.
ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ತೇಜಸ್‌ನಲ್ಲಿ ಯಶಸ್ವಿಯಾಗಿ ಪ್ರಯಾಣ ಪೂರೈಸಿದ್ದೇನೆ, ಇದು ವಿಸ್ಮಯಕಾರಿ ಅನುಭವವಾಗಿದೆ, ಇಡೀ ಜಗತ್ತಿನಲ್ಲಿ ನಾವು ಯಾರಿಗೂ ಕಮ್ಮಿ ಇಲ್ಲ. ನಮ್ಮ ದೇಶದ ಸ್ಥಳೀಯ ಸಾಮರ್ಥ್ಯಗಳಲ್ಲಿ ನನ್ನ ವಿಶ್ವಾಸವನ್ನು ಗಣನೀಯವಾಗಿ ಹೆಚ್ಚಿಸಿದೆ. ನಮ್ಮ ದೇಶದ ಸಾಮರ್ಥ್ಯದ ಬಗ್ಗೆ ಹೊಸ ಹೆಮ್ಮೆ, ಹೊಸ ಆಶಾವಾದ ಸಿಕ್ಕಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಹಾರಾಟಕ್ಕೂ ಮೊದಲು ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಸ್ವದೇಶಿ ನಿರ್ಮಿತ ಯುದ್ಧ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚೊಚ್ಚಲ ಪಯಣಕ್ಕೆ ಸಿದ್ಧತೆಗಳನ್ನು ಮೇಲ್ವಿಚಾರಣೆ ಮಾಡಿದರು.
ರಕ್ಷಣಾ ಉತ್ಪನ್ನಗಳ ಆಂತರಿಕ ಉತ್ಪಾದನೆ
ರಕ್ಷಣಾ ಉತ್ಪನ್ನಗಳನ್ನು ದೇಶೀಯವಾಗಿ ಉತ್ಪಾದಿಸುವ ಪ್ರಯತ್ನವನ್ನು ಮೋದಿ ಆರಂಭಿಸಿದರು. ಅಮೆರಿಕ ರಕ್ಷಣಾ ದೈತ್ಯ ಜಿಇ ಏರೋಸ್ಪೇಸ್ ಮತ್ತು ಹೆಚ್‌ಎಎಲ್ ಜಂಟಿಯಾಗಿ MK-ತೇಜಸ್ ಫೈಟರ್ ಜೆಟ್‌ಗಾಗಿ ಎಂಜಿನ್‌ಗಳನ್ನು ತಯಾರಿಸಿವೆ.
Successfully completed a sortie on the Tejas. The experience was incredibly enriching, significantly bolstering my confidence in our country’s indigenous capabilities, and leaving me with a renewed sense of pride and optimism about our national potential. pic.twitter.com/4aO6Wf9XYO
— Narendra Modi (@narendramodi) November 25, 2023