ನಿತೀಶ್ ಕುಮಾರ್‌, ಸ್ಟಾಲಿನ್ ಜನ್ಮ ದಿನ : ಶುಭಾಶಯ ಕೋರಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.

ಟ್ವಿಟ್ಟರ್‌ ನಲ್ಲಿ ಶುಭಾಶಯ ತಿಳಿಸಿರುವ ಅವರು, ʼತಮಿಳುನಾಡು ಸಿಎಂ ಸ್ಟಾಲಿನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಆಶೀರ್ವದಿಸಲಿʼ ಎಂದು ಟ್ವೀಟ್‌ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ ಮಾಡಿರುವ ಮೋದಿ ಅವರು, ʼಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೇವರು ಆರೋಗ್ಯಕರ ಜೀವನವನ್ನು ಆಶೀರ್ವದಿಸಲಿ ಎಂದು ಶುಭಾಶಯ ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!