ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜನ್ಮದಿನಕ್ಕೆ ಶುಭ ಕೋರಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ 65 ನೇ ಜನ್ಮದಿನ. ಅವರ ಜನ್ಮ ದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.

ಪ್ರಧಾನಿಯವರು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ, “ರಾಷ್ಟ್ರಪತಿ ಅವರಿಗೆ ಜನ್ಮದಿನದ ಶುಭಾಶಯಗಳು. ಬುದ್ಧಿವಂತಿಕೆ, ಘನತೆ ಮತ್ತು ನಮ್ಮ ಜನರ ಕಲ್ಯಾಣಕ್ಕಾಗಿ ಬದ್ಧತೆಯ ದಾರಿದೀಪ, ರಾಷ್ಟ್ರದ ಪ್ರಗತಿಯನ್ನು ಮತ್ತಷ್ಟು ಹೆಚ್ಚಿಸುವ ಅವರ ಪ್ರಯತ್ನಗಳಿಗಾಗಿ ಅವರು ಮೆಚ್ಚುಗೆ ಪಡೆದಿದ್ದಾರೆ. ಅವರ ಸಮರ್ಪಣೆ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತಿದೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ನೀಡಲಿ ಎಂದು ಹಾರೈಸುತ್ತೇನೆ” ಎಂದು ಟ್ವೀಟ್‌ ಮಾಡಿದ್ದಾರೆ.

ಮುರ್ಮು ಅವರು 2022ರಲ್ಲಿ ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ದೇಶದ ಮೊದಲ ಬುಡಕಟ್ಟು ಮಹಿಳೆ ರಾಷ್ಟ್ರಪತಿ ಎಂಬ ಖ್ಯಾತಿಗೆ ಹೆಸರಾಗಿದ್ದಾರೆ. ಪ್ರತಿಭಾ ಪಾಟೀಲ್ ನಂತರ ಉನ್ನತ ಹುದ್ದೆಗೆ ನೇಮಕಗೊಂಡ ಎರಡನೇ ಮಹಿಳೆ ಇವರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!