ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಸಾಧ್ಯವಾದದ್ದನ್ನು ಸಾಧ್ಯವಾಗಿಸುವ ಸಾಮರ್ಥ್ಯವಿದೆ ಎಂದು ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಎರಡು ಭಾಷಣಗಳ ಬಿಡುಗಡೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಅಮೆರಿಕ ಭಾರತದ ಮೇಲೆ ಶೇ 50ರಷ್ಟು ಸುಂಕ ವಿಧಿಸಿದ್ದರೂ, ಟ್ರಂಪ್ ಯಾವಾಗಲೂ ಮೋದಿ ಅವರನ್ನು ತಮ್ಮ ಉತ್ತಮ ಸ್ನೇಹಿತ ಎಂದೇ ಶ್ಲಾಘಿಸಿದ್ದಾರೆ. ಅದೇ ರೀತಿ, ಚೀನಾ ಅಧ್ಯಕ್ಷ ಕ್ಸಿ ಕೂಡ ‘ಅಂತಾರಾಷ್ಟ್ರೀಯ ರಾಜಕೀಯದಲ್ಲಿನ ವ್ಯತ್ಯಾಸಗಳ ಹೊರತಾಗಿಯೂ’ ಪ್ರಧಾನಿ ಮೋದಿ ಅವರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ ಎಂದು ಹೇಳಿದರು.
ರಷ್ಯಾ ಅಧ್ಯಕ್ಷ ಪುಟಿನ್ ಅವರು ನರೇಂದ್ರ ಮೋದಿಯವರ ಆಪ್ತ ಮಿತ್ರರು. ಅದೇ ಸಮಯದಲ್ಲಿ, ಕ್ಸಿ ಕೂಡ ಮೋದಿ ಅವರ ಉತ್ತಮ ಮಿತ್ರರಾಗಿದ್ದಾರೆ. ನಾವು ಇಂದು ಅದನ್ನು ನೋಡಿದ್ದೇವೆ ಮತ್ತು ಅದಕ್ಕಾಗಿಯೇ ಅವರು ಅಸಾಧ್ಯ ಎನ್ನುವುದನ್ನು ಸಾಧ್ಯವಾಗಿಸುತ್ತಾರೆ. ಪ್ರಧಾನಿ ಜನಸಾಮಾನ್ಯರಿಗಾಗಿ ಶುದ್ಧ ಹೃದಯದಿಂದ ಕೆಲಸ ಮಾಡುತ್ತಾರೆ ಮತ್ತು ಪ್ರತಿಯಾಗಿ ಏನನ್ನೂ ನಿರೀಕ್ಷಿಸುವುದಿಲ್ಲ’ ಎಂದು ಪ್ರತಿಪಾದಿಸಿದರು.