ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಗಸ್ಟ್ 15 ರ ಸ್ವಾತಂತ್ರ್ಯ ದಿನದಂದು ಘೋಷಣೆ ಮಾಡಿದ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಿದ್ಧತೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಸಭೆ ನಡೆಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿದ್ದ ಪ್ರಧಾನಿ ಮೋದಿ ದೇಶವನ್ನುದ್ಧೇಶಿ ಭಾಷಣ ಮಾಡಿದ್ದರು. ಈ ವೇಳೆ ಕೆಲ ಘೋಷಣೆಗಳನ್ನು ಮಾಡಿದ್ದರು. ಮಧ್ಯಮ ವರ್ಗದ ಕುಟುಂಬಗಳಿಗೆ ಮನೆ ಒದಿಗಿಸುವ ಕುರಿತು ಘೋಷಿಸಿದ್ದರು. ಇದೀಗ ಮಧ್ಯಮ ವರ್ಗದ ಕುಟುಂಬಗಳಿಗೆ ಮನೆ ಕನಸು ನನಸಾಗಿಸಲು ಮೋದಿ ಯೋಜನೆಗಳ ಪರಾಮರ್ಶೆ ನಡೆಸಿದ್ದಾರೆ.
ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಸೋಲಾರ್ ಸೌಲಭ್ಯ ಯೋಜನೆಯನ್ನು ಮೋದಿ ಘೋಷಿಸಿದ್ದರು. ಈ ಕುರಿತು ಮೋದಿ ಚರ್ಚಿಸಿದ್ದಾರೆ. ಯೋಜನೆ ಪ್ರತಿಯೊಬ್ಬ ಫಲಾನುಭವಿಗೆ ಯಾವುದೇ ಸಮಸ್ಯೆಗಳಿಲ್ಲದೆ ತಲುಪಬೇಕು. ಸರಳ ಹಾಗೂ ಸುಲಭವಾಗಿ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಪಡೆಯುವಂತಾಗಬೇಕು ಎಂದು ಮೋದಿ ಸೂಚಿಸಿದ್ದಾರೆ.
ಪ್ರಧಾನಿ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಪಿ ಕೆ ಮಿಶ್ರಾ ಮತ್ತು ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.